
ಮೈಸೂರು: ಸಿದ್ದರಾಮಯ್ಯ ತವರು ಕ್ಷೇತ್ರ ಮೈಸೂರಿನಲ್ಲಿ ಲೋಕಸಭಾ, ನೈರುತ್ಯ ಶಿಕ್ಷಕರ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಿದೆ. ಇದು ಸಿಎಂಗೆ ತೀವ್ರ ಮುಖಭಂಗ ಉಂಟುಮಾಡಿದೆ.
ನೈರತ್ಯ ಶಿಕ್ಷಕರ ಚುನಾವಣೆಯಲ್ಲಿ ಮೈಸೂರಿನ ಕಾಂಗ್ರೆಸ್ ಆಭ್ಯರ್ಥಿ ಕೆ.ಕೆ. ಮಂಜುನಾಥ್ ಸೋಲು ಅನುಭವಿಸಿದ್ದಾರೆ. ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಭೋಜೇಗೌಡ ವಿರುದ್ದ 5,267 ಮತಗಳ ಅಂತರದಿಂದ ಸೋಲು ಕಂಡಿದ್ದಾರೆ. ಇತ್ತ ಲೋಕಸಭಾ ಚುನಾವಣೆಯಲ್ಲೂ ಸಿಎಂ ತವರಿನಲ್ಲಿ ಕಾಂಗ್ರೆಸ್ ಮುಖಭಂಗ ಅನುಭವಿಸಿತ್ತು. ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ವಿರುದ್ದ ಸ್ಪರ್ಧೆ ಮಾಡಿದ್ದ ಕಾಂಗ್ರೆಸ್ ನ ಎಂ ಲಕ್ಷ್ಮಣ್ ಸೋಲು ಕಂಡಿದ್ದು ಸಿ ಎಂ ಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ
Poll (Public Option)

Post a comment
Log in to write reviews