2024-12-24 01:07:51

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕಾಂಗ್ರೆಸ್ನ ಶಾಸಕ ಸತೀಶ್ ಸೈಲ್ಗೆ 7 ವರ್ಷ ಜೈಲು

ಬೇಲೆಕೇರಿ ಬಂದರಿನಿಂದ ಅದಿರು ಅಕ್ರಮ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾರವಾರದ ಕಾಂಗ್ರೆಸ್  ಶಾಸಕ  ಸತೀಶ್ ಸೈಲ್ಗೆ 7 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ. ಪ್ರಕರಣದ ವಾದ-ಪ್ರತಿವಾದ ಆಲಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಕ್ಟೋಬರ್ 24 ರಂದು ಶಾಸಕ ಸತೀಶ್ ಸೈಲ್ ದೋಷಿ ಎಂದು ತೀರ್ಪು ನೀಡಿತ್ತು. ಇಂದು ಶಿಕ್ಷೆ ವಿಧಿಸಿದೆ.
ಬಳ್ಳಾರಿ, ಹೊಸಪೇಟೆ, ಸಂಡೂರು, ಚಿತ್ರದುರ್ಗದ ಅರಣ್ಯ ಪ್ರದೇಶಗಳಿಂದ ಅಕ್ರಮವಾಗಿ: 1 ಭಾರಿ ಪ್ರಮಾ ಣದ ಕಬ್ಬಿಣದ ಅದಿರು ವಿದೇಶಕ್ಕೆ ರಫ್ತಾಗುತ್ತಿತ್ತು. 2010ರ ಮಾ.20 ರಂದು ಅರಣ್ಯ ಇಲಾಖೆ 350 ಕೋಟಿ ರೂ. ಮೌಲ್ಯದ ಬರೋಬ್ಬರಿ 8.5 ಲಕ್ಷ ಮೆಟ್ರಿಕ್ ಟನ್‌ ಅದಿರು ಮುಟ್ಟುಗೋಲು ಹಾಕಿಕೊಂಡಿತ್ತು. ಈ ಅದಿರನ್ನು ಕಾಯ್ದುಕೊಳ್ಳುವಂತೆ ಬೇಲೆಕೇರು ಬಂದರು ನಿರ್ವಹಿಸುತ್ತಿದ್ದ ಬಂದರು ಇಲಾಖೆಗೆ ಅರಣ್ಯ ಇಲಾಖೆಯು ಸೂಚನೆಯನ್ನು ನೀಡಿತ್ತು. ಕೆಲವು ತಿಂಗಳ ಬಳಿಕ ಅರಣ್ಯ ಇಲಾಖೆ ತಂಡ ಮರು ಪರಿಶೀಲಿಸಿದಾಗ ಬಂದರಿನಲ್ಲಿ ಕೇವಲ 2 ಲಕ್ಷ ಮೆಟ್ರಿಕ್ ಟನ್ ಅದಿರು ಮಾತ್ರ ಇತ್ತು. 250 ಕೋಟಿ ರೂ. ಅದಿರು ನಾಪತ್ತೆ ಬಗ್ಗೆ ಬಂದರು ಅಧಿಕಾರಿ, ಅದಿರು ಸಾಗಣೆ ಕಂಪನಿಗಳ ವಿರುದ್ಧ ಅರಣ್ಯ ಇಲಾಖೆಯು ದೂರು ನೀಡಿತ್ತು. ಈ ಅಕ್ರಮವೆಸಗಿದ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಲೋಕಾಯುಕ್ತರು ಸರ್ಕಾರಕ್ಕೆ ವರದಿ ಸಲ್ಲಿಸಿ ಒತ್ತಾಯ ಮಾಡಿದ್ದರು. ಆಗ ಹಗರಣ ಬೆಳಕಿಗೆ ಬಂದಿತ್ತು. 2010ರ ಜೂ.23ರಂದು ಸರ್ಕಾರ ಪ್ರಕರಣವನ್ನು ಸಿಐಡಿಗೆ ಒಪ್ಪಿಸಿತ್ತು. 2011ರಲ್ಲಿ ಪ್ರಕರಣವನ್ನು ಸುಪ್ರೀಂಕೋರ್ಟ್ ಸಿಬಿಐಗೆ ವಹಿಸಿತ್ತು.
 

Post a comment

No Reviews