
ಬೆಂಗಳೂರು ; ಮಹಾನಗರವನ್ನು ವಿಭಜಿಸುವ ಮಹತ್ವದ ತೀರ್ಮಾನವನ್ನುರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ.
ಬೆಂಗಳೂರನ್ನು ಐದು ವಿಭಾಗಗಳಾಗಿ ವಿಂಗಡಿಸುವ ವಿಧೇಯಕಕ್ಕೆ ಸಂಪುಟ ಸಭೆಯಲ್ಲಿ ಗ್ರೀನ್ ಸಿಗ್ನಲ್ ಸಿಕ್ಕಿದೆ. ಗ್ರೇಟರ್ ಬೆಂಗಳೂರು ಅಥಾರಿಟಿ ಮಾಡುವ ಸಲಹೆಗೆ ಅನುಮೋದನೆ ನೀಡಲಾಗಿದೆ. ಇಂದೇ ವಿಧಾನಸಭೆಯಲ್ಲಿ ಬೆಂಗಳೂರನ್ನು ವಿಭಜಿಸುವ ವಿಧೇಯಕ ಮಂಡನೆ ಮಾಡುವ ಸಾಧ್ಯತೆ ಇದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಸಿಎಂ ಸಿದ್ದರಾಮಯ್ಯ ಅವರು ಅಧ್ಯಕ್ಷರಾಗಿರುತ್ತಾರೆ. 5-10 ಕಾರ್ಪೊರೇಷನ್‌ಗಳು ಇರಲಿದ್ದು, ಒಂದೊಂದು ಕಾರ್ಪೊರೇಷನ್‌ಗೆ ಒಬ್ಬ ಆಯುಕ್ತ ಇರಲಿದ್ದಾರೆ. ಜಲಮಂಡಳಿ, ಬಿಡಿಎ, ಬೆಸ್ಕಾಂ ಗ್ರೇಟರ್ ಬೆಂಗಳೂರು ವ್ಯಾಪ್ತಿಗೆ ಬರಲಿವೆ. ಪೂರ್ವ, ಪಶ್ಚಿಮ, ದಕ್ಷಿಣ, ಉತ್ತರ, ಕೇಂದ್ರ ಸೇರಿದಂತೆ ಇನ್ನಷ್ಟು ಬಿಬಿಎಂಪಿ ಆಗಿ ವಿಂಗಡಣೆ ಮಾಡಲಾಗುತ್ತದೆ. ಗ್ರೇಟರ್ ಬೆಂಗಳೂರು ವ್ಯಾಪ್ತಿಯು ನೆಲಮಂಗಲ, ದೇವನಹಳ್ಳಿ, ಹೊಸಕೋಟೆ, ರಾಮನಗರ, ಕನಕಪುರ, ಆನೆಕಲ್, ಬೆಂಗಳೂರು ಗ್ರಾಮಾಂತರ ಪ್ರದೇಶದವರೆಗೆ ಇರಲಿದೆ. ಈ ಕುರಿತಾದ ಬಿಲ್ ಮಂಡನೆಗೆ ಸಂಪುಟ ಸಭೆ ಅನುಮೋದನೆ ನೀಡಿದೆ.
Poll (Public Option)

Post a comment
Log in to write reviews