
ಹಾಸನ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕಾನ್‌ಸ್ಟೇಬಲ್ ಪತಿಯೊಬ್ಬ ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಆವರಣದಲ್ಲಿ ಪತ್ನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ.
ನಗರ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಲೋಕನಾಥ್ ಮತ್ತು ಮಮತಾ ಮಧ್ಯೆ 4-5 ದಿನಗಳಿಂದ ಜಗಳ ನಡೆದಿತ್ತು. ಇಂದು ಪತಿ ವಿರುದ್ಧ ದೂರು ನೀಡಲು ಎಸ್‌ಪಿ ಕಚೇರಿಗೆ ಪತ್ನಿ ಬಂದಿದ್ದಾರೆ.
ಪತ್ನಿ ತನ್ನ ವಿರುದ್ಧ ದೂರು ನೀಡಲು ಬರುತ್ತಿರುವುದನ್ನು ಗಮನಿಸಿದ ಲೋಕನಾಥ್ ಆವರಣದಲ್ಲೇ ಮಮತಾ ಎದೆಗೆ ಚೂರಿ ಇರಿದಿದ್ದಾನೆ. ಕೂಡಲೇ ಅಲ್ಲಿದ್ದ ಮಂದಿ ಮಮತಾ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಮತಾ ಮೃತಪಟ್ಟಿದ್ದಾರೆ.
Poll (Public Option)

Post a comment
Log in to write reviews