
ನವದೆಹಲಿ: ಮೊದಲ ಸಚಿವ ಸಂಪುಟ ಸಭೆಯಲ್ಲೇ ಎನ್‌ಡಿಎ ಸರ್ಕಾರ 3 ಕೋಟಿ ಮನೆಗಳ ನಿರ್ಮಾಣಕ್ಕೆ ಅಗತ್ಯ ನೆರವು ನೀಡಿದೆ.
ಎನ್‌ಡಿಎ ಸರ್ಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ (ಪಿಎಂಎವೈ) ಅಡಿಯಲ್ಲಿ 3 ಕೋಟಿ ಮನೆಗಳ ನಿರ್ಮಾಣಕ್ಕೆ ಅಗತ್ಯ ನೆರವು ಒದಗಿಸಲು ತೀರ್ಮಾನಿಸಲಾಗಿದೆ. ಪಿಎಂಎವೈ ಯೋಜನೆಗೆ ಅರ್ಹ ಕುಟುಂಬಗಳ ಸಂಖ್ಯೆ ಹೆಚ್ಚಾಗಿರುವುದನ್ನು ಪರಿಗಣಿಸಿ, ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ 3 ಕೋಟಿ ಮನೆಗಳ ನಿರ್ಮಾಣಕ್ಕೆ ಅಗತ್ಯ ನೆರವು ನೀಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಮನೆಗಳ ನಿರ್ಮಾಣಕ್ಕೆ ನೆರವು ನೀಡುವ ಪಿಎಂಎವೈ ಯೋಜನೆಯನ್ನು ಕೇಂದ್ರ ಸರ್ಕಾರವು 2015ರಲ್ಲಿ ಜಾರಿಗೊಳಿಸಿದೆ. ಈ ಯೋಜನೆ ಅಡಿಯಲ್ಲಿ, ಇದುವರೆಗೆ 4.21 ಕೋಟಿ ಮನೆ ನಿರ್ಮಾಣವಾಗಿದ್ದು ಇದೀಗ ಮತ್ತೊಮ್ಮೆ 3 ಕೋಟಿ ಮನೆಗಳ ನಿರ್ಮಾಣಕ್ಕೆ ನೆರವು ನೀಡಿದೆ.
Poll (Public Option)

Post a comment
Log in to write reviews