
ತುಮಕೂರು: ಕಲುಷಿತ ನೀರು ಸೇವಿಸಿ ಚಿಕ್ಕಮಗು ಸೇರಿದಂತೆ ಇಲ್ಲಿವರೆಗೆ ಒಟ್ಟು ಆರು ಮಂದಿ ಸಾವನ್ನಪ್ಪಿರುವ ಘಟನೆ ಮಧುಗಿರಿ ತಾಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಲುಷಿತ ನೀರು ಸೇವಿಸಿದ್ದರಿಂದ ಕಳೆದ ನಾಲ್ಕು ದಿನಗಳಿಂದ ಗ್ರಾಮದಲ್ಲಿ ಜನರು ಬಲಿಯಾಗುತ್ತಿದ್ದಾರೆ. ನಿನ್ನೆ ತಡರಾತ್ರಿ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.
ಆಸ್ಪತ್ರೆಯಲ್ಲಿ ಮೂವರು ವೃದ್ಧರು, ಮಕ್ಕಳು ಸೇರಿದಂತೆ ಹತ್ತು ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಅಲ್ಲದೇ ಶುದ್ದ ಕುಡಿಯುವ ನೀರು ಪೂರೈಕೆ ಮಾಡುವಂತೆ ಕ್ರಮಕೈಗೊಳ್ಳಲು ಡಿಸಿಗೆ ಸೂಚನೆ ನೀಡಿದರು.
ಸಚಿವ ಕೆಎನ್ ರಾಜಣ್ಣ ಕೂಡ ಆಸ್ಪತ್ರೆಗೆ ಭೇಟಿ ನೀಡಿದ್ದರು. ಈ ವೇಳೆ ಗ್ರಾಮಸ್ಥರು ತಾಲೂಕಿನಾದ್ಯಂತ ಹಲವಾರು ವರ್ಷಗಳಿಂದ ಸ್ವಚ್ಛತೆ ಕಾಣದ ಓವರ್‌ಹೆಡ್ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸುವಂತೆ ಎಚ್ಚರಿಕೆ ನೀಡಿದರೂ ಅಧಿಕಾರಿಗಳು ಕ್ರಮಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ. ಅಲ್ಲದೇ ಈ ಘಟನೆಗೆ ಚಿನ್ನೇನಹಳ್ಳಿ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಹೇಳಿದ್ದಾರೆ.
Poll (Public Option)

Post a comment
Log in to write reviews