
ರಾಮನಗರ: ತುಮಕೂರಿನ ಕಲುಷಿತ ನೀರು ಪ್ರಕರಣದ ಬಳಿಕ ಜಿಲ್ಲೆಯ 5240 ಕಡೆ ಕುಡಿಯುವ ನೀರಿನ ಮಾದರಿ ಸಂಗ್ರಹಿಸಲಾಗಿದೆ. ಕಲುಷಿತ ನೀರು ಸೇವಿಸಿ ತುಮಕೂರಿನಲ್ಲಿ 6 ಮಂದಿ ಮೃತಪಟ್ಟಿದ್ದರು. ಈ ಹಿನ್ನಲೆಯಲ್ಲಿ ರಾಮನಗರ ಜಿಲ್ಲಾರೋಗ್ಯ ಇಲಾಖೆ ಮುಂಜಾಗ್ರತೆ ವಹಿಸಿದ್ದು, ವಿವಿಧ ಮೂಲಗಳಿಂದ ಪೂರೈಕೆಯಾಗುತ್ತಿರುವ ಕುಡಿಯುವ ನೀರಿನ ಮಾದರಿ ಸಂಗ್ರಹಕ್ಕೆ ಮುಂದಾಗಿದೆ. ಪ್ರಯೋಗಾಲಯದಲ್ಲಿ ಪರೀಕ್ಷೆ ನಡೆಸಿ ನೀರಿನ ಶುದ್ಧತೆಯನ್ನು ಖಚಿತಪಡಿಸಿಕೊಳ್ಳುತ್ತಿದೆ.
ಓವರ್ ಹೆಡ್ ಟ್ಯಾಂಕ್, ಕೊಳವೆ ಬಾವಿ, ಕೆರೆ, ಕೊಳಾಯಿ, ಶುದ್ಧ ಕುಡಿಯುವ ನೀರಿನ ಘಟಕ ಸೇರಿದಂತೆ ಜಿಲ್ಲೆಯಾದ್ಯಂತ 5,240 ಕಡೆ ನೀರಿನ ಮಾದರಿ ಸಂಗ್ರಹಿಸಿದೆ. ಇದನ್ನು ಜಿಲ್ಲಾ ಕೇಂದ್ರದಲ್ಲಿರುವ ಪ್ರಯೋಗಾಲಯ ಮತ್ತು ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳಿಸಲಾಗಿದ್ದು ವರದಿಯ ನಿರೀಕ್ಷೆಯಲ್ಲಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.
Poll (Public Option)

Post a comment
Log in to write reviews