2024-12-24 06:55:07

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕಲುಷಿತ ನೀರು ಕುಡಿದು 7 ಜನ ಅಸ್ವಸ್ಥ

ದಾವಣಗೆರೆ: ಕಲುಷಿತ ನೀರು ಕುಡಿದು 7 ಮಂದಿ ಅಸ್ವಸ್ಥರಾಗಿರುವ ಘಟನೆ ಹೊನ್ನಾಳಿ ತಾಲೂಕಿನ ಹುಣಸಘಟ್ಟ ಗ್ರಾಮದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಹಿನ್ನೆಲೆ ಹುಣಸಘಟ್ಟ ಪಿಡಿಒ ಪರಮೇಶ್ ಕಳ್ಳೂರು ಅವರನ್ನು ಅಮಾನತು ಮಾಡಲಾಗಿದೆ.

ಹುಣಸಘಟ್ಟ ಗ್ರಾಮದಲ್ಲಿ ಕಳೆದ ನಾಲ್ಕೈದು ದಿನಗಳ ಹಿಂದೆ ಕಲುಷಿತ ನೀರು ಕುಡಿದು 7 ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಪೈಕಿ ಓರ್ವ ಮಹಿಳೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಈ ಹಿನ್ನೆಲೆ ಕರ್ತವ್ಯ ನಿರ್ಲಕ್ಷ್ಯ ಆರೋಪದ ಮೇಲೆ ಪಿಡಿಒ ಪರಮೇಶ್ ಅವರನ್ನು ಅಮಾನತು ಮಾಡಲಾಗಿದೆ.

ಕುಡಿಯುವ ನೀರಿನ ಪೈಪ್‌ನಲ್ಲಿ ಚರಂಡಿ ನೀರು ಸೇರಿಕೊಳ್ಳುತ್ತಿದ್ದರೂ ಪಿಡಿಒ ನಿರ್ಲಕ್ಷ್ಯವಹಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಕಾರಣದಿಂದ ಪಿಡಿಒ ಅಮಾನತುಗೊಳಿಸಿ ಜಿಲ್ಲಾ ಪಂಚಾಯತ್ ಸಿಇಒ ಸುರೇಶ್ ಬಿ ಇಟ್ನಾಳ್ ಆದೇಶ ಹೊರಡಿಸಿದ್ದಾರೆ.

Post a comment

No Reviews