
ಹಾಸನದ ಐತಿಹಾಸಿಕ ಹಾಸನಾಂಬಾ ದೇಗುಲ ಇಂದಿನಿಂದ ಭಕ್ತರ ದರ್ಶನಕ್ಕೆ ಮುಕ್ತವಾಗುತ್ತಿದ್ದು, ಈಗಾಗಲೇ ಹಾಸನಾಂಬ ಕ್ಷೇತ್ರದಲ್ಲಿ ಭರ್ಜರಿ ಸಿದ್ಧತೆಗಳು ನಡೆದಿದ್ದು, ದೇಗುಲವನ್ನು ದಸರಾ ಮಾದರಿಯ ವಿವಿಧ ಲೈಟಿಂಗ್ಸ್ ಸಿಂಗರಿಸಲಾಗಿದೆ.
ಹಾಸನಾಂಬ ದರ್ಶನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಇನ್ನೇನು ಕೆಲವೇ ಕ್ಷಣಗಳಲ್ಲಿ ದೇಗುಲದ ಗರ್ಭಗುಡಿ ಬಾಗಿಲು ತೆರೆಯಲಿದೆ. ಇನ್ನೂ ಒಟ್ಟು 11 ದಿನ ದೇಗುಲದ ಬಾಗಿಲು ತೆರೆದಿರಲಿದೆ. ಆದರೆ 9 ದಿನಗಳು ಮಾತ್ರ ಭಕ್ತರ ದರ್ಶನಕ್ಕೆ ಅವಕಾಶ ಸಿಗಲಿದೆ. ದಿನದ 24 ಗಂಟೆಗಳೂ ಕೂಡ ದೇವಿಯ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಭಕ್ತರಿಗೆ ದರ್ಶನಕ್ಕೆ ಬೇಕಾದ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಈ ಬಾರಿ ದಸರಾ ಮಾದರಿಯ ಲೈಟಿಂಗ್ಸ್, ಲೈಟಿಂಗ್ ವೀಕ್ಷಣೆಗೆ ಡಬಲ್ ಡೆಕ್ಕರ್ ಬಸ್, ಭಕ್ತರಿಗೆ ವಿಶೇಷ ದರ್ಶನ ಅವಕಾಶ ಸೇರಿದಂತೆ ಹಲವು ಸಿದ್ಧತೆಗಳನ್ನು ಮಾಡಲಾಗಿದೆ. ಇನ್ನೂ ನವೆಂಬರ್ 3ಕ್ಕೆ ಮದ್ಯಾಹ್ನ 12ಕ್ಕೆ ಗರ್ಭಗುಡಿ ಬಾಗಿಲನ್ನು ಮುಚ್ಚಲಾಗುತ್ತದೆ. ಅಲ್ಲಿವರೆಗೆ ಭಕ್ತರು ದೇವಿಯ ದರ್ಶನ ಪಡೆಬಹುದಾಗಿದೆ.
Poll (Public Option)

Post a comment
Log in to write reviews