
ದಾವಣಗೆರೆ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ದಂಪತಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ತಾಲೂಕಿನ ಮಾಯಕೊಂಡ ಗ್ರಾಮದ ಕಾಟೀಹಳ್ಳಿ ನಡೆದಿದೆ.
ಲತಾ ಹಾಗೂ ನಾಗರಾಜ್ ಮೃತ ದುರ್ದೈವಿ ದಂಪತಿ. ತಮ್ಮ ಜಮೀನಿನಲ್ಲಿ ಗುರುವಾರ ಕೆಲಸ ಮಾಡುತ್ತಿದ್ದ ವೇಳೆ ಟ್ರಾನ್ಸ್ಫಾರ್ಮರ್ನಿಂದ ವಿದ್ಯುತ್ ಗ್ರೌಂಡ್ ಆಗಿದ್ದನ್ನು ಗಮನಿಸಿದೆ ತೆರಳಿದ ಪರಿಣಾಮ ಶಾಕ್ ತಗುಲಿ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿಷಯ ತಿಳಿದು ಮಾಯಕೊಂಡ ಕಾಂಗ್ರೆಸ್ ಶಾಸಕ ಕೆ.ಎಸ್. ಬಸವಂತಪ್ಪ ತಕ್ಷಣ ಗ್ರಾಮಕ್ಕೆ ತೆರಳಿ ಸಂತಾಪ ಸೂಚಿಸಿದರು. ಕುಟುಂಬಸ್ಥರಿಗೆ ಧೈರ್ಯ ತುಂಬಿದರು. ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ.
Poll (Public Option)

Post a comment
Log in to write reviews