ಟಾಪ್ 10 ನ್ಯೂಸ್
ನ್ಯಾಯಾಲಯಕ್ಕೆ ಹಾಜರಾಗಲು ರಾಹುಲ್ ಗಾಂಧಿಗೆ ಕೋರ್ಟ್ ಸೂಚನೆ : ನ್ಯಾಯಾಧೀಶರ ಮುಂದೆ ಹಾಜರಾದ ಸಿಎಂ ಮತ್ತು ಡಿಸಿಎಂ

ಬೆಂಗಳೂರು: ಬಿಜೆಪಿ ಹೂಡಿದ್ದ ಮಾನನಷ್ಟ ಪ್ರಕರಣ ಸಂಬಂಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಜರಾಗಬೇಕೆಂದು ನ್ಯಾಯಾಲಯ ಸೂಚಿಸಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ನ್ಯಾಯಾಧೀಶರ ಮುಂದೆ ಶನಿವಾರ ಹಾಜರಾದರು.
ಖಾಸಗಿ ದೂರಿನ ಸಂಬಂಧ 42 ನೇ ವಿಶೇಷ ನ್ಯಾಯಾಲಯದ ಮುಂದೆ ಸಿಎಂ ಹಾಗೂ ಡಿಸಿಎಂ ಹಾಜರಾಗಿದ್ದರು. ಇದೇ ಪ್ರಕರಣ ಸಂಬಂಧ ರಾಹುಲ್ ಗಾಂಧಿ ಹಾಜರಾಗಬೇಕೆಂದು ಸೂಚಿಸಿರುವ ಕೋರ್ಟ್ ವಿಚಾರಣೆ ಮುಂದೂಡಿದೆ.
ನ್ಯಾಯಾಲಯಕ್ಕೆ ಹಾಜರಾಗಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಿವಿಲ್ ಸ್ವರೂಪದ ಪ್ರಕರಣ ಇದಾಗಿದೆ. ನಾನು ಕಾನೂನು ರಕ್ಷಕರಾಗಿ, ಪಾಲಕರಾಗಿ ನ್ಯಾಯಾಲಯದ ಸೂಚನೆ ಮೇರೆಗೆ ಇಂದು ನಾನು ನ್ಯಾಯಾಧೀಶರ ಮುಂದೆ ಹಾಜರಾಗಿದ್ದೇನೆ. ಜಾಮೀನು ಸಹ ಪಡೆದಿದ್ದೇನೆ. ಕೆಪಿಸಿಸಿ ಅಧ್ಯಕ್ಷರು ಹಾಗೂ ರಾಹುಲ್ ಗಾಂಧಿ ಅವರ ವಿರುದ್ಧವೂ ಖಾಸಗಿ ದೂರು ದಾಖಲಾಗಿತ್ತು. ರಾಹುಲ್ ಗಾಂಧಿಯವರೂ ನ್ಯಾಯಾಲಯಕ್ಕೆ ಹಾಜರಾಗುತ್ತಾರೆ ಎಂದರು.
Poll (Public Option)

Post a comment
Log in to write reviews