
ಮೈತ್ರಿ ನಾಯಕರ ಟಿಕೆಟ್ ಗುದ್ದಾಟವನ್ನೇ ಅಸ್ತ್ರ ಮಾಡಿಕೊಂಡ ಕಾಂಗ್ರೆಸ್ ಪಡೆ ಸಿಪಿ ಯೋಗೇಶ್ವರ್‌ರನ್ನ ಪಕ್ಷಕ್ಕೆ ಸೆಳೆದಿದ್ದರ ಜತೆಗೆ, ಚನ್ನಪಟ್ಟಣ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಚನ್ನಪಟ್ಟಣದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ನಾಮಪತ್ರ ಸಲ್ಲಿಸಿದ್ದು, ಅಸಲಿ ಯುದ್ಧಕ್ಕೆ ರಣಕಹಳೆ ಊದಿದ್ದಾರೆ.
ಚನ್ನಪಟ್ಟಣದಲ್ಲೇ ತಂಗಿದ್ದ ಸಿಪಿವೈ ಮಂಗಳವಾರ ಪೇಟೆಯಲ್ಲಿರುವ ಬಸವನಗುಡಿಯಲ್ಲಿ ಪೂಜೆ ಸಲ್ಲಿಸಿ ಒಂದೂವರೆ ಕಿಲೋ ಮೀಟರ್ ರ್ಯಾಲಿ ನಡೆಸಿದರು. ರ್ಯಾಲಿಯಲ್ಲಿ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡು ಘೋಷಣೆ ಮೊಳಗಿಸಿದರು.
ರೋಡ್ ಶೋ ಮೂಲಕ ಚನ್ನಪಟ್ಟಣ ತಾಲೂಕು ಕಚೇರಿಗೆ ಆಗಮಿಸಿದ ಸಿಪಿ ಯೋಗೇಶ್ವರ್ ನಾಮಪತ್ರ ಸಲ್ಲಿಸಿದರು. ಸಿಪಿ ಯೋಗೇಶ್ವರ್ ನಾಮಪತ್ರ ಸಲ್ಲಿಕೆ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವರು ಶಾಸಕರು ಉಪಸ್ಥಿತರಿದ್ದರು.
Poll (Public Option)

Post a comment
Log in to write reviews