
ದಕ್ಷಿಣ ಕನ್ನಡ: ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ, ಮಂಗಳೂರು ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದೆ. ಭಾರೀ ಮಳೆಯಿಂದ ಕುಮಾರಧಾರ ಸ್ನಾನಘಟ್ಟ ಮುಳುಗಿದೆ. ಈ ಹಿನ್ನಲೆ ನದಿಗಿಳಿಯದಂತೆ ಭಕ್ತಾದಿಗಳಿಗೆ ಮತ್ತು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
ಉಡುಪಿಯಲ್ಲೂ ವರುಣನ ಆರ್ಭಟ ಜೋರಾಗಿದ್ದು ಜಿಲ್ಲೆಯಲ್ಲಿ ರಾತ್ರಿಯಿಡೀ ಭಾರೀ ಮಳೆ ಸುರಿದಿದೆ. ಜಿಲ್ಲೆಯ ತಗ್ಗು ಪ್ರದೇಶದಲ್ಲಿ ಮಳೆಯಿಂದಾಗಿ ಅಲ್ಲಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ. ಉಡುಪಿ ಶ್ರೀ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ನೀರು ನುಗ್ಗಿ ಸಮಸ್ಯೆ ಎದುರಾಗಿತ್ತು. ಸೂಕ್ತ ಒಳಚರಂಡಿ ವ್ಯವಸ್ಥೆ ಇಲ್ಲದ ಕಾರಣ ಪ್ರತಿ ವರ್ಷವೂ ಇಲ್ಲಿ ನೆರೆಹಾವಳಿ ಎದುರಾಗುತ್ತೆ ಎನ್ನಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ರಾತ್ರಿಯೇ ಅಲ್ಲಿನ ಜನರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲಾಗಿದೆ.
Poll (Public Option)

Post a comment
Log in to write reviews