2024-09-19 04:37:45

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಭಾರತ-ಪಾಕ್ ನಡುವೆ ಇಂದು ಕ್ರಿಕೆಟ್‌ ಕದನ: ಸ್ಟೇಡಿಯಂಗೆ ಭಾರೀ ಭದ್ರತೆ

ನ್ಯೂಯಾರ್ಕ್: ಭಾರತ ಮತ್ತು ಪಾಕಿಸ್ತಾನ ನಡುವಿನ ಇಂದಿನ ಟಿ20 ವಿಶ್ವಕಪ್ ಕ್ರಿಕೆಟ್‌ ಪಂದ್ಯದ ಕ್ರೀ ನಸ್ಸೌ ಕೌಂಟಿ ಕ್ರೀಡಾಂಗಣಕ್ಕೆ ಭಾರೀ ಭದ್ರತೆ ಒದಗಿಸಲಾಗಿದೆ.
ಟಿ20 ಯ 19ನೇ ಪಂದ್ಯ ಇಂದು ನಡೆಯಲಿದ್ದು. ಪಂದ್ಯ ನಡೆಯುವ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ 4 ಹಂತದ ಭಾರೀ ಭದ್ರತೆ ಏರ್ಪಡಿಸಲಾಗಿದೆ. ಉಭಯ ತಂಡಗಳು 2 ವರ್ಷಗಳ ಬಳಿಕ ಕ್ರಿಕೆಟ್‌ ಪಂದ್ಯದಲ್ಲಿ ಎದುರಾಗಲಿರುವ ಕಾರಣ ಪಂದ್ಯ ಭಾರೀ ಮಹತ್ವ ಪಡೆದುಕೊಂಡಿದೆ.
ಕಳೆದ ವಾರ ಐಸಿಸ್-ಕೆ ಹೆಸರಿನ ಭಯೋತ್ಪಾದಕ ಸಂಘಟನೆಯು ಲೋನ್ ವುಲ್ಫ್ (ಏಕ ವ್ಯಕ್ತಿ) ದಾಳಿ ನಡೆಸುವುದಾಗಿ ಘೋಷಿಸಿತ್ತು. ಹೀಗಾಗಿ ಕ್ರೀಡಾಂಗಣಕ್ಕೆ ನ್ಯೂಯಾರ್ಕ್ ಪೊಲೀಸರಿಂದ ಮತ್ತು ಸೇನಾಪಡೆಯಿಂದ ಬಿಗಿ ಬಂದೋಬಸ್ತ್ ಏರ್ಪಾಟು ಮಾಡಲಾಗಿದೆ. ಭಾರತೀಯ ಕಾಲಮಾನ ರಾತ್ರಿ 8 ಗಂಟೆಯಿಂದ ಪಂದ್ಯ ಆರಂಭವಾಗಲಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಭಾರತ ತಂಡದಲ್ಲಿದ್ದಾರೆ .
ಪಾಕಿಸ್ತಾನ ತಂಡ: ಬಾಬರ್ ಅಜಂ (ನಾಯಕ), ಅಬ್ರಾರ್ ಅಹ್ಮದ್, ಅಜಮ್ ಖಾನ್, ಫಖರ್ ಜಮಾನ್, ಹ್ಯಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಇಮಾದ್ ವಾಸಿಮ್, ಮೊಹಮ್ಮದ್ ಅಬ್ಬಾಸ್ ಅಫ್ರಿದಿ, ಮೊಹಮ್ಮದ್ ಅಮೀರ್, ಮೊಹಮ್ಮದ್ ರಿಜ್ವಾನ್, ನಸೀಮ್ ಶಾ, ಸೈಮ್ ಅಯೂಬ್, ಶಾದಾಬ್ ಖಾನ್, ಶಾಹೀನ್ ಶಾಹ್ಮಾನ್ ಅಫ್ರಿದಿ, ಉಸ್ಮಾನ್ ಖಾನ್ ಪಾಕ್‌ ತಂಡದಲ್ಲಿದ್ದಾರೆ.

Post a comment

No Reviews