ಕ್ರಿಕೆಟರ್ ಮುತ್ತಯ್ಯ ಮುರಳಿಧರನ್ ನಿಂದ ರಾಜ್ಯದಲ್ಲಿ 1400 ಕೋಟಿ ಹೂಡಿಕೆ: ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು: ಶ್ರೀಲಂಕಾದ ಕ್ರಿಕೆಟರ್ ಮುತ್ತಯ್ಯ ಮುರಳೀಧರನ್ ರಾಜ್ಯದಲ್ಲಿ 1400 ಕೋಟಿ ರೂ. ಹೂಡಿಕೆ ಮಾಡಿ ಹೊಸ ಉದ್ಯಮ ಪ್ರಾರಂಭಿಸಲಿದ್ದಾರೆ.
ಚಾಮರಾಜನಗರ ಜಿಲ್ಲೆಯ ಬದನಕುಪ್ಪೆಯಲ್ಲಿ ಮುತ್ತಯ್ಯ ಮುರಳೀಧರನ್ 1,400 ಕೋಟಿ ರೂ. ಹೂಡಿಕೆ ಮಾಡಿ ತಂಪು ಪಾನೀಯ ಮತ್ತು ಸಿಹಿ ತಿಂಡಿಗಳ ಉದ್ಯಮ ಆರಂಭಿಸುತ್ತಿದ್ದಾರೆ.
ಮುತ್ತಯ್ಯ ಮುರಳೀಧರನ್ ಹಂತಹಂತವಾಗಿ ಒಟ್ಟು 1,400 ಕೋಟಿ ರೂ. ಹೂಡಿಕೆ ಮಾಡಲಿದ್ದಾರೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ.
ಮುತ್ತಯ್ಯ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಮಾತನಾಡಿದ ಸಚಿವರು, ಬದನಕುಪ್ಪೆಯಲ್ಲಿ ಮುರಳೀಧರನ್ ಅವರು ‘ಮುತ್ತಯ್ಯ ಬ್ರಿವರೇಜಸ್ ಮತ್ತು ಕನ್ಫೆಕ್ಷನರೀಸ್’ ಎನ್ನುವ ಬ್ರ್ಯಾಂಡ್ ನಲ್ಲಿ ತಮ್ಮ ಉದ್ದಿಮೆ ಆರಂಭಿಸುತ್ತಿದ್ದು, ಶುರುವಿನಲ್ಲಿ 230 ಕೋಟಿ ರೂಪಾಯಿ ಹೂಡಿಕೆಗೆ ಯೋಜನೆ ರೂಪಿಸಲಾಗಿತ್ತು. ನಂತರ ಅದು ಈಗ ಸಾವಿರ ಕೋಟಿ ಮುಟ್ಟುತ್ತಿದೆ. ಮುಂದಿನ ದಿನಗಳಲ್ಲಿ 1,400 ಕೋಟಿ ಆಗಲಿದೆ ಎಂದು ಮುತ್ತಯ್ಯ ತಮಗೆ ತಿಳಿಸಿದ್ದಾರೆ ಎಂದರು.
ಇದಕ್ಕಾಗಿ ಅವರಿಗೆ ಈಗಾಗಲೇ 46 ಎಕರೆ ಭೂಮಿ ಕೊಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಕೆಲ ಸಣ್ಣಪುಟ್ಟ ತೊಡಕುಗಳಿದ್ದವು. ಅವುಗಳನ್ನು ಕೂಡಲೇ ಸರಿಪಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಬದನಕುಪ್ಪೆಯಲ್ಲಿ ಮುಂಬರುವ ಜನವರಿಯಲ್ಲಿ ಉತ್ಪಾದನಾ ಚಟುವಟಿಕೆ ಆರಂಭವಾಗಲಿದೆ ಎಂದು ಅವರು ನುಡಿದರು.ಮುಂಬರುವ ದಿನಗಳಲ್ಲಿ ಮುತ್ತಯ್ಯ ಧಾರವಾಡದಲ್ಲಿ ಕೂಡ ತಮ್ಮ ಉದ್ಯಮದ ಒಂದು ಘಟಕ ಸ್ಥಾಪಿಸಲಿದ್ದಾರೆ ಎಂದರು.
Poll (Public Option)

Post a comment
Log in to write reviews