ಬೆಂಗಳೂರು: ಶಕ್ತಿ ಯೋಜನೆಯ ಅಡಿ ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿ ಸಂಸ್ಥೆಯಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಸುಮಾರು 3,930 ಕೋಟಿ ರೂಪಾಯಿ ದಾಖಲೆ ಮಟ್ಟದ ಆದಾಯ ಬಂದಿದೆ ಎನ್ನಲಾಗಿದೆ.
ಕೆಎಸ್‌ಆರ್‌ಟಿಸಿ 2023-24ರಲ್ಲಿ 3,930 ಕೋಟಿ ರೂಪಾಯಿ ದಾಖಲೆ ಮಟ್ಟದ ಆದಾಯ ಗಳಿಸಿದೆ. ಕೆಎಸ್‌ಆರ್‌ಟಿಸಿ ಆದಾಯ 2023ರಲ್ಲಿ 3,930 ಕೋಟಿ ರೂಪಾಯಿ ತಲುಪಿದ್ದು, 2023ರ ಜೂನ್‌ನಿಂದ 2024ರ ಮೇ ವರೆಗೆ ಒಟ್ಟು 4,809 ಕೋಟಿ ರೂಪಾಯಿಗಳ ಸಂಚಾರ ಆದಾಯ ಸಂಗ್ರಹವಾಗಿದೆ ಎಂಬ ಮಾಹಿತಿ ದೊರಕಿದೆ.
ಕಾಂಗ್ರೆಸ್ ಪಕ್ಷ ನೀಡಿದ್ದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಶಕ್ತಿ ಯೋಜನೆ ಕೂಡಾ ಒಂದು. ಈ ಯೋಜನೆಯಡಿ ರಾಜ್ಯಾದ್ಯಂತ ಕೋಟ್ಯಾಂತರ ಮಹಿಳೆಯರು ಉಚಿತ ಪ್ರಯಾಣ ಮಾಡುತ್ತಿದ್ದಾರೆ. ಸದ್ಯ ಈ ಯೋಜನೆಯಿಂದ ಕೆಎಸ್‌ಆರ್‌ಟಿಸಿ ದಾಖಲೆ ಮೊತ್ತದ ಆದಾಯ ಗಳಿಸಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಕಲ್ಯಾಣ ಕರ್ಣಾಟಕ ರಸ್ತೆ ಸಾರಿಗೆ ನಿಗಮ, ಉತ್ತರ ಪಶ್ಚಿಮ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದೆ.
Post a comment
Log in to write reviews