
ಹಾಸನ: ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನಾಂಬ ದೇವಸ್ಥಾನದ ಗರ್ಭಗುಡಿಯ ಬಾಗಿಲನ್ನು ಈ ವರ್ಷ ಅ. 24 ರಂದು ಬೆಳಗ್ಗೆ ಶಾಸ್ತ್ರೋಕ್ತವಾಗಿ ತೆರೆಯಲಾಗಿದೆ. ಮೊದಲ ದಿನ ಭಕ್ತರಿಗೆ ಪ್ರವೇಶವಿರಲಿಲ್ಲ. ಅ. 25ರ ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ ಭಕ್ತರ ಪ್ರವೇಶಕ್ಕೆ ಅನುವು ಮಾಡಿಕೊಡಲಾಗಿದೆ
ಹಾಸನಾಂಬೆ ದೇವಿ ದರ್ಶನಕ್ಕೆ ಎರಡನೇ ದಿನ ಶನಿವಾರದಂದು ಭಕ್ತರ ದಂಡು ಹರಿದು ಬರುತ್ತಿದೆ. ನಸುಕಿನ ನಾಲ್ಕು ಗಂಟೆಯಿಂದಲೇ ಹಾಸನ ದೇವಿ ದರ್ಶನ ಆರಂಭಗೊಂಡಿದೆ. ಮಧ್ಯರಾತ್ರಿಯಿಂದಲೇ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರು ದೇವಿಯ ದರ್ಶನ ಪಡೆಯುತ್ತಿದ್ದಾರೆ. ವೀಕೆಂಡ್ ಹಿನ್ನೆಲೆಯಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಸಾವಿರ ರೂ., ಮುನ್ನೂರು ರೂ. ಪಾವತಿಸಿದರೆ ವಿಶೇಷ ದರ್ಶನವಿರುತ್ತದೆ. ಈ ಸಾಲಿನಲ್ಲೂ ಸಾವಿರಾರು ಸಂಖ್ಯೆಯಲ್ಲಿ ಭಕ್ತರಿದ್ದಾರೆ. ಅತಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಹಾಸನಾಂಬೆ ದೇವಿ ದರ್ಶನ ಪಡೆಯುತ್ತಿದ್ದಾರೆ.
ಹೊರ ಜಿಲ್ಲೆ, ಹೊರ ರಾಜ್ಯಗಳಿಂದಲೂ ಭಕ್ತರು, ರಾಜಕೀಯ ಗಣ್ಯರು, ಸೆಲೆಬ್ರಿಟಿಗಳು ಆಗಮಿಸಿ ದೇವಿಯ ದರ್ಶನಕ್ಕೆ ಆಗಮಿಸುತ್ತಿದ್ದಾರೆ. ನ. 3 ರಂದು ಜಾತ್ರಾ ಮಹೋತ್ಸವ ನಡೆಯಲಿದ್ದು, ನ. 2ರವರೆಗೆ ಭಕ್ತಾದಿಗಳಿಗೆ ಜಾತ್ರೆ ನೋಡಲು ಅವಕಾಶವಿರುತ್ತದೆ.
Poll (Public Option)

Post a comment
Log in to write reviews