
ಮೈಸೂರು: ಸಿಲಿಂಡರ್ ಸೋರಿಕೆಯಿಂದಾಗಿ ಮನೆಯೊಂದು ಹೊತ್ತಿ ಉರಿದ ಘಟನೆ ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಮುಂಜನಹಳ್ಳಿಯಲ್ಲಿ ನಡೆದಿದೆ.
ಗ್ರಾಮದ ಶಾರದಮ್ಮಈರಣ್ಣ ನಾಯಕ ಮತ್ತು ಜವರಮ್ಮ ಎಂಬುವರಿಗೆ ಸೇರಿದ ಮನೆಯಾಗಿದೆ. ಮನೆಯಲ್ಲಿ ರಾತ್ರಿ ಸಿಲಿಂಡರ್ ಗ್ಯಾಸ್ ವಾಸನೆ ಬರುತ್ತಿತ್ತು. ಇದನ್ನು ಗಂಭೀರವಾಗಿ ಪರಿಗಣಿಸದ ಮನೆಯವರು ಬೆಳಿಗ್ಗೆ ಗ್ಯಾಸ್ ಏಜೆನ್ಸಿಯ ಸಿಬ್ಬಂದಿಗಳಿಗೆ ತಿಳಿಸೋಣ ಎಂದು ಮಲಗಿದ್ದಾರೆ. ಈ ವೇಳೆ ಮನೆಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಇದನ್ನರಿತ ಮನೆಯವರು ತಕ್ಷಣ ಎಚ್ಚರಗಗೊಂಡು ಮನೆಯಿಂದ ಹೊರಗಡೆ ಬರುವಷ್ಟರಲ್ಲಿ ಬೆಂಕಿ ಆವರಿಸಿದೆ. ಕುಟುಂಬಸ್ಥರು ತಕ್ಷಣ ಅಗ್ನಿಶಾಮಕದಳಕ್ಕೆ ಕರೆ ಮಾಡಿ ಸುದ್ದಿ ತಿಳಿಸಿದ್ದು, ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ಬೆಂಕಿ ನಂದಿಸಿದ್ದಾರೆ. ಇದರ ಪರಿಣಾಮವಾಗಿ ಟಿವಿ, ಫ್ರಿಡ್ಜ್, ಮಿಕ್ಸಿ, ಏರ್ ಕೂಲರ್ ಚಿನ್ನ ಬೆಳ್ಳಿ ಸೇರಿದಂತೆ 1 ಲಕ್ಷದ 42 ಸಾವಿರ ನಗದು ನಾಶವಾಗಿದ್ದು,10 ಲಕ್ಷಕ್ಕೂ ಹೆಚ್ಚು ಗೃಹಬಳಕೆ ವಸ್ತುಗಳು ನಷ್ಟವಾಗಿದ್ದು, ವಾಸ ಮಾಡಲು ಮನೆ ಇಲ್ಲದೆ ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ.
Poll (Public Option)

Post a comment
Log in to write reviews