
ಬೆಂಗಳೂರು : ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಭ್ಯರ್ಥಿಯ ಬಗ್ಗೆ ಕುತೂಹಲ ಇರುವ ನಡುವೆ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಮ್ಮ ಕುಟುಂಬದಿಂದ ಯಾರೂ ಚುನಾವಣಾಗೆ ಸ್ಪರ್ಧಿಸುದಿಲ್ಲ ಎಂದು ಹೇಳುವ ಮೂಲಕ ಗೊಂದಲಗಳಿಗೆ ತೆರೆ ಎಳೆದ್ದಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಡಿ.ಕೆ.ಶಿವಕುಮಾರ್, ನಮ್ಮ ಕುಟುಂಬದ ಯಾವುದೇ ಸದಸ್ಯರು ಚುನಾವಣಾ ರಾಜಕೀಯಕ್ಕೆ ಬರುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ನಾನು ಬಹಳ ಹಿಂದೆಯೇ ಸ್ಪಷ್ಟಪಡಿಸಿದ್ದೇನೆ. ಆದರೂ ಆಗಾಗ ಈ ಕುರಿತು ಗೊಂದಲಗಳು ಸೃಷ್ಟಿಯಾಗುತ್ತಿವೆ. ಅಂತಹ ವದಂತಿಗಳಿಗೆ ಯಾರೂ ಕಿವಿಕೊಡಬಾರದು ಎಂದು ಮನವಿ ಮಾಡಿದ್ದಾರೆ.
ಚನ್ನಪಟ್ಟಣ ಚುನಾವಣೆಯಲ್ಲಿ ಮಾಜಿ ಸಂಸದ ಡಿ.ಕೆ.ಸುರೇಶ್ ಅಭ್ಯರ್ಥಿಯಾಗಲಿದ್ದಾರೆ ಎಂಬ ವದಂತಿಗಳು ಆರಂಭದಲ್ಲಿದ್ದವು. ಆದರೆ ಡಿ.ಕೆ.ಸುರೇಶ್ ಅದನ್ನು ಸಂಪೂರ್ಣವಾಗಿ ಅಲ್ಲಗಳೆದಿದ್ದಾರೆ. ಜನ ತಮಗೆ ವಿಶ್ರಾಂತಿ ಪಡೆಯಲು ಸೂಚಿಸಿದ್ದು, ಅದರಂತೆ ತಾವು ಚುನಾವಣಾ ರಾಜಕೀಯದಿಂದ ದೂರ ಉಳಿದು ವಿಶ್ರಾಂತಿ ಪಡೆಯುವುದಾಗಿ ಸ್ಪಷ್ಟಪಡಿಸಿದ್ದಾರೆ.
Poll (Public Option)

Post a comment
Log in to write reviews