
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ 17 ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ನ್ಯಾಯಾಲಯ ಮತ್ತೆ ವಿಸ್ತರಣೆ ಮಾಡಿಲು ಆದೇಶ ಹೊರಡಿಸಿದೆ.
ಕಳೆದ ಬಾರಿ ಕೋರ್ಟ್ 14 ದಿನಗಳವರೆಗೆ ವಿಸ್ತರಿಸಿದ್ದ ಅವಧಿಗೆ ಇಂದು ಮುಗಿದ ಹಿನ್ನೆಲೆ ಮತ್ತೆ ವಿಚಾರಣೆ ಮುಂದುಡಲಾಯಿತು.
ನಟ ದರ್ಶನ್ ಪ್ರಕರಣದಲ್ಲಿದ್ದ ಎಲ್ಲ 17 ಆರೋಪಿಗಳ ನ್ಯಾಯಾಂಗ ಅವಧಿಯನ್ನು ಸೆಪ್ಟೆಂಬರ್ 9ರವರೆಗೆ ವಿಸ್ತರಿಸಿದ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಮೂಲಕ 'ದರ್ಶನ್ ಆಂಡ್ ಗ್ಯಾಂಗ್' ಗೆ ಮತ್ತೆ ಸಂಕಷ್ಟ ಎದುರಾಗಿದೆ.
ಪ್ರಕರಣ ಕುರಿತು ಬುಧವಾರ ವಿಚಾರಣೆ ನಡೆಸಿದ ಬೆಂಗಳೂರಿನ 24ನೇ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಧೀಶರಾದ ಎಸ್ ನಿರ್ಮಲಾ ಅವರಿದ್ದ ನ್ಯಾಯಪೀಠವು ಮತ್ತೆ 12 ದಿನ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿದೆ
Poll (Public Option)

Post a comment
Log in to write reviews