
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ನಟ ದರ್ಶನ್ ಮತ್ತು ಗ್ಯಾಂಗ್ ಅನ್ನು ಇಂದು(ಜೂನ್ 15 ಶನಿವಾರ) ಪರಪ್ಪನ ಅಗ್ರಹಾರದಲ್ಲಿರುವ ಜೈಲಿಗೆ ಕಳುಹಿಸುವ ಚಿಂತನೆ ನಡೆಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಮಹಜರು ಬಹುತೇಕ ಮುಗಿದಿದ್ದು ಇಂದು ನ್ಯಾಯಲಯಕ್ಕೆ ಹಾಜರು ಪಡಿಸಲಿದ್ದು ಪರಪ್ಪನ ಅಗ್ರಹಾರದಲ್ಲಿರುವ ಜೈಲು ಸೇರಿಸಿದಂತೆ ಆರೋಪಿಗಳನ್ನು ಪ್ರತ್ಯೇಕ ಜೈಲಿನಲ್ಲಿ ಇರಿಸಲು ಮನವಿ ಸಲ್ಲಿಸಲಾಗುವುದು ಎಂಬ ಮಾಹಿತಿ ಲಭ್ಯವಾಗಿದೆ.
ಆರೋಪಿಗಳು ಒಂದೇ ಕಡೆ ಇದ್ದರೆ ಪ್ರಕರಣದಿಂದ ತಪ್ಪಿಸಿಕೊಳ್ಳಲು ಒಂದಷ್ಟು ಪ್ಲಾನ್ ಮಾಡಬಹುದು. ಇಲ್ಲ ಅವರವರ ಮಧ್ಯೆ ಗಲಾಟೆಯಾಗೋ ಸಾಧ್ಯತೆಯಿದ್ದು, ಈ ಹಿನ್ನೆಲೆ ಬೇರೆ ಬೇರೆ ಜೈಲಿಗೆ ಶಿಫ್ಟ್ ಮಾಡಲು ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.
Poll (Public Option)

Post a comment
Log in to write reviews