
ಬೆಂಗಳೂರು: ನಟ ದರ್ಶನ್ ಮತ್ತು ಪವಿತ್ರಾ ಗೌಡ ಅವರ ಜಾಮೀನು ಅರ್ಜಿಯ ವಿಚಾರಣೆಗಳು ಪೂರ್ಣಗೊಂಡಿದ್ದು ಅ.14 ರಂದು ಆದೇಶ ಪ್ರಕಟವಾಗಲಿದೆ.
ಇಂದು ದರ್ಶನ್ ಪರ ಹಿರಿಯ ಕ್ರಿಮಿನಲ್ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದರೆ ಪೊಲೀಸರ ಪರವಾಗಿ ಎಸ್ ಪಿಪಿ ಪ್ರಸನ್ನ ಕುಮಾರ್ ವಾದಿಸಿದರು.
ಬುಧವಾರ ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆಯನ್ನು ಪೂರ್ಣಗೊಳಿಸಿದ್ದ ಕೋರ್ಟ್ ಅ.14 ರಂದು ಆದೇಶ ಪ್ರಕಟಿಸುವುದಾಗಿ ಹೇಳಿತ್ತು.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ದರ್ಶನ್ ಅವರು ಬಳ್ಳಾರಿ ಜೈಲಿನಲ್ಲಿದ್ದರೆ ಪವಿತ್ರಾ ಗೌಡ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಇದ್ದಾರೆ.
Poll (Public Option)

Post a comment
Log in to write reviews