
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ & ಗ್ಯಾಂಗ್ ಮತ್ತೆ ಪೊಲೀಸ್ ಕಸ್ಟಡಿಗೆ ನೀಡಿ 42ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ. ದರ್ಶನ್, ಪವಿತ್ರಾ ಗೌಡ ಸೇರಿದಂತೆ 13 ಮಂದಿಯನ್ನು 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ. ಹೀಗಾಗಿ ಜೂನ್ 20ರವರೆಗೆ ದರ್ಶನ್ & ಗ್ಯಾಂಗ್ ಪೊಲೀಸ್ ಕಸ್ಟಡಿಯಲ್ಲಿರಲಿದೆ.
ಹೆಚ್ಚಿನ ವಿಚಾರಣೆ ನಡೆಸಲು ದರ್ಶನ್ & ಗ್ಯಾಂಗ್ ಅನ್ನು ಪೊಲೀಸ್ ಕಸ್ಟಡಿಗೆ ನೀಡಬೇಕು ಎಂದು ಪೊಲೀಸರು, ಕೋರ್ಟ್‌ಗೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ಈ ಆದೇಶ ನೀಡಿದೆ.
ಕೋರ್ಟ್ ಪೊಲೀಸರಿಗೂ ಷರತ್ತು ನೀಡಿದೆ. ಅರೋಪಿಗಳ ಜೊತೆ ಅಮಾನವೀಯವಾಗಿ ನಡೆಸಿಕೊಳ್ಳಬಾರದು. ಆರೋಪಿಗಳಿಗೆ ವಕೀಲರ ಭೇಟಿಗೆ ಅವಕಾಶ ನೀಡಬೇಕು ಎಂದು ಪೊಲೀಸರಿಗೆ ಷರತ್ತು ನೀಡಿದೆ.
Poll (Public Option)

Post a comment
Log in to write reviews