ದರ್ಶನ್ & ಗ್ಯಾಂಗ್ ರಾಜ್ಯಾದ್ಯಂತ ರೌಡಿಗಳೊಂದಿಗೆ ಸಂಪರ್ಕ-ತನಿಖೆಯಲ್ಲಿ ಬಯಲು?

ಬೆಂಗಳೂರು : ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟ ದರ್ಶನ್ ಮತ್ತು ತಂಡದ ಸದಸ್ಯರ ಮೊಬೈಲ್ ಕರೆಗಳ ವಿವರ, ವಾಟ್ಸ್ ಆ್ಯಪ್ ಅನ್ನು ತಾಂತ್ರಿಕ ತಜ್ಞರು ಪರಿಶೀಲಿಸಿದ್ದು, ಬಂಧಿತ ಆರೋಪಿಗಳ ಪೈಕಿ ಕೆಲವರು ರೌಡಿಗಳ ಸಂಪರ್ಕದಲ್ಲಿ ಇದ್ದದ್ದು ಗೊತ್ತಾಗಿದೆ.
ಬಂಧಿತ ಆರೋಪಿಗಳ ಆರು ತಿಂಗಳ ಮೊಬೈಲ್ ಕರೆಗಳ ವಿವರ ಪಡೆಯಲಾಗುತ್ತಿದೆ. ಬಂಧಿತರು ರೌಡಿಗಳ ಸಂಪರ್ಕದಲ್ಲಿ ಇರುವುದು ತನಿಖೆಯಿಂದ ಬಯಲಾಗಿದೆ. ಆರೋಪಿಗಳು ಯಾವ ಉದ್ದೇಶದಿಂದ ರೌಡಿಗಳೊಂದಿಗೆ ಸಂಪರ್ಕ ಹೊಂದಿದ್ದರು ಎಂಬುದನ್ನು ಪತ್ತೆ ಮಾಡಲಾಗುತ್ತಿದೆ’ ಎಂದು ಮೂಲಗಳು ಹೇಳಿವೆ.
ದರ್ಶನ್ ಮ್ಯಾನೇಜರ್ ನಾಗರಾಜ್ ಅಲಿಯಾಸ್ ನಾಗ, ಕಾರು ಚಾಲಕ ಲಕ್ಷ್ಮಣ್ ಅವರ ಮೊಬೈಲ್ ಪರಿಶೀಲನೆ ನಡೆಸಲಾಗಿದೆ. ಈ ಇಬ್ಬರು ರೌಡಿಗಳೊಂದಿಗೆ ಚರ್ಚಿಸಿರುವ ಮಾಹಿತಿ ಲಭಿಸಿದೆ. ನಟ ಬೇರೆ ಬೇರೆ ಜಿಲ್ಲೆಗಳಿಗೆ ಸಿನಿಮಾ ಪ್ರಚಾರಕ್ಕೆ ತೆರಳಿದ್ದಾಗ ಆಯಾ ಭಾಗದಲ್ಲಿ ಅಭಿಮಾನಿಗಳನ್ನು ಸೇರಿಸಲು, ಸ್ಥಳೀಯವಾಗಿ ರೌಡಿ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದವರ ಜೊತೆಗೆ ಮಾತುಕತೆ ನಡೆಸಿರುವ ಸಾಧ್ಯತೆಯೂ ಇದೆ’ ಎಂದು ಮೂಲಗಳು ತಿಳಿಸಿವೆ.
Poll (Public Option)

Post a comment
Log in to write reviews