
ಯಾದಗಿರಿ: ಕೊಲೆ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಅವರ ಅಭಿಮಾನಿಯೊಬ್ಬ ಪಂಚರ್ ಅಂಗಡಿಯಲ್ಲಿ ಕೆಲಸ ಮಾಡುವ ಯುವಕನಿಗೆ ಜೀವ ಬೆದರಿಕೆ ಹಾಕಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಇದೀಗ ಬೆದರಿಕೆ ಹಾಕಿರುವ ಆಡಿಯೋ ವೈರಲ್ ಆಗಿದ್ದು, ಯಾದಗಿರಿ ಪೊಲಿಸರು ದರ್ಶನ್ ಅಭಿಮಾನಿ ಸಂಘದ ಅಧ್ಯಕ್ಷ ರಾಜು ಎಂಬಾತನನ್ನ ವಶಕ್ಕೆ ಪಡೆದಿದ್ದಾರೆ.
ಗಂಗಾ ನಗರದ ನಿವಾಸಿ ಅಭಿ ಎಂಬ ಯುವಕನಿಗೆ ದರ್ಶನ್ ಅಭಿಮಾನಿ ಸಂಘದ ಜಿಲ್ಲಾಧ್ಯಕ್ಷ ರಾಜು ಇತ್ತೀಚೆಗೆ ಬೆದರಿಕೆ ಹಾಕಿದ್ದರು ಎನ್ನಲಾದ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಆಡಿಯೋದಲ್ಲಿ ರಾಜು, ಬಾಸ್ ಬಗ್ಗೆ ಮಾತನಾಡಿದ್ರೆ ಕೊಲೆ ಮಾಡೋದಾಗಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.
Poll (Public Option)

Post a comment
Log in to write reviews