
ಮಂಡ್ಯ: ದರ್ಶನ್ ನನ್ನ ಮಗು ಅಂತ ತಿಳಿದುಕೊಳ್ಳಿ. ಮಗು ತಪ್ಪು ಮಾಡಿದಾಗ ತಂದೆಗೆ ಎಷ್ಟು ನೋವಾಗುತ್ತದೋ ನನಗೂ ಅಷ್ಟೇ ನೋವಾಗಿದೆ. ಆ ಮಗು ಕೂಡ ಅಷ್ಟೇ ನೋವು ಅನುಭವಿಸುತ್ತಿರುತ್ತದೆ. ಎಂದು ಖ್ಯಾತ ಸಂಗೀತ ನಿರ್ದೇಶಕ, ನಾದಬ್ರಹ್ಮ ಹಂಸಲೇಖ ಭಾವುಕರಾಗಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ವಿಚಾರ ಕುರಿತು ಮಂಡ್ಯದಲ್ಲಿ ಮಾತನಾಡಿದ ಅವರು, ದರ್ಶನ್ ನನ್ನ ಮಗು ಅಂತ ತಿಳಿದುಕೊಳ್ಳಿ. ಮಗು ತಪ್ಪು ಮಾಡಿದ್ರೆ ತಂದೆ ಎಷ್ಟು ನೋವು ತಿಂತಾನೋ, ನಾನು ಅಷ್ಟೇ ನೋವು ತಿಂತಿದ್ದೀನಿ. ಆ ಮಗು ಕೂಡ ಅಷ್ಟೇ ನೋವು ತಿನ್ನುತ್ತಿರುತ್ತೆ. ನಾವು ಆತ ಕೊಟ್ಟಿರುವ ಕೊಡುಗೆ ಕಡೆ ಗಮನ ಕೊಡೋಣ .
ಅತ್ಯುನ್ನತ ಸ್ಥಾನಕ್ಕೆ ಏರಿದವನು ಮತ್ತೆ ಕೆಳಗೆ ಬೀಳೋದು ಬೇಡ. ಕೇರಳ ಚಿತ್ರೋದ್ಯಮ ಹೀಗೇ ಆಗಿತ್ತು. ಅದೀಗ ಉತ್ತುಂಗದಲ್ಲಿದೆ. ಕೆಳಗೆ ಬಿದ್ದು ಮತ್ತೆ ಮೇಲೆ ಎದ್ದಿದೆ. ನಮ್ಮದು ಚಂದನವನ. ಒಂದು ಮಳೆಗೆ ಮರ ಒಣಗಿದರೇನಂತೆ. ಇನ್ನೊಂದು ಮಳೆಗೆ ಕಾಡು ಬೆಳೆದೇ ಬೆಳೆಯುತ್ತೆ ಎಂದು ನುಡಿದಿದ್ದಾರೆ.
Poll (Public Option)

Post a comment
Log in to write reviews