
ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ನಟ ದರ್ಶನ್ ಹಾಗೂ ನಟಿ ಪವಿತ್ರಾ ಗೌಡ ಅವರು ಜಾಮೀನು ಪಡೆಯಲು ಅರ್ಜಿ ಸಲ್ಲಿಸಿದ್ದು, ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಇಬ್ಬರ ಅರ್ಜಿ ವಿಚಾರಣೆಯನ್ನು ಮುಂದೂಡಿದೆ. ಆದ್ದರಂತೆ ಸೆಪ್ಟೆಂಬರ್ 27ಕ್ಕೆ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ ಹಾಗೂ ದರ್ಶನ್ ಗೆಳತಿ ಪವಿತ್ರಾ ಗೌಡ ಜಾಮೀನು ಜಾಮೀನು ಅರ್ಜಿ ವಿಚಾರಣೆ ಸೆ.25ಕ್ಕೆ ವಿಚಾರಣೆ ನಡೆಯಲಿದೆ. ಜಾಮೀನು ಪಡೆಯಲು ದರ್ಶನ್ ಮತ್ತು ಪವಿತ್ರಾ ಗೌಡ ಇನ್ನಷ್ಟ ದಿನ ಕಾಯುವುದು ಅನಿವಾರ್ಯ ಆಗಿದೆ.
ದರ್ಶನ್ ಮತ್ತು ಪವಿತ್ರಾ ಗೌಡ ಜಾಮೀನಿಗಾಗಿ ಅರ್ಜಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಆಕ್ಷೇಪಣೆ ಸಲ್ಲಿಸಲು ಎಸ್ಪಿಪಿ ಪ್ರಸನ್ನ ಕುಮಾರ್ ಅವರು ಕಾಲಾವಕಾಶ ಕೋರಿದ್ದಾರೆ. ಅದಕ್ಕೆ ನ್ಯಾಯಾಲಯ ಅವಕಾಶ ನೀಡಿದೆ. ವಿಚಾರಣೆಯನ್ನು ಮುಂದೂಡಿ 57ನೇ ಸಿಸಿಹೆಚ್ ನ್ಯಾಯಾಲಯದ ಜಡ್ಜ್ ಜೈಶಂಕರ್ ಆದೇಶ ನೀಡಿದ್ದಾರೆ.
Poll (Public Option)

Post a comment
Log in to write reviews