ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 2ನೇ ಆರೋಪಿ ನಟ ದರ್ಶನ್ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್‌ನಲ್ಲಿ ನಡೆಯಲಿದೆಯಲಿದೆ.
ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ನ್ಯಾಯಪೀಠದಲ್ಲಿ ಈ ಅರ್ಜಿಯ ವಿಚಾರಣೆ ನಡೆಯಲಿದೆ. ಈ ಹಿಂದಿನ ವಿಚಾರಣೆ ಅಗಸ್ಟ್.22 ವೇಳೆ ದರ್ಶನ್ ಆರೋಗ್ಯದ ಕುರಿತು ಮಾಹಿತಿ ನೀಡುವಂತೆ ಜೈಲು ಅಧಿಕಾರಿಗಳಿಗೆ ಹೈಕೋರ್ಟ್ ಸೂಚನೆ ನೀಡಿದೆ, ಅಲ್ಲದೇ ಅರ್ಜಿಯ ಕುರಿತಂತೆ ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರಿ ವಿಶೇಷ ಅಭಿಯೋಜಕ ಪ್ರಸನ್ನ ಕುಮಾರ್ ಅವರಿಗೆ ಸೂಚನೆ ನೀಡಿ ವಿಚಾರಣೆ ಮುಂದೂಡಿಕೆ ಮಾಡಿತ್ತು.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿರುವ ದರ್ಶನ್‌ಗೆ ನಗರದ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ತಿರಸ್ಕರಿಸಿದ ಹಿನ್ನೆಲೆಯಲ್ಲಿ ಅವರು ಅಗಸ್ಟ್ 15ರಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಜಾಮೀನು ಕೋರಿ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಅ.14ರಂದು ವಜಾಗೊಳಿಸಿ ನಗರದ 57ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ಆದೇಶ ನೀಡಿತ್ತು.
ಇದರಿಂದ ಅಗಸ್ಟ್ 15ರಂದು ಹೈಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಿದ ದರ್ಶನ್, ಪ್ರಕರಣದಲ್ಲಿ ಪ್ರತ್ಯಕ್ಷ ದರ್ಶಿಗಳ ಹೇಳಿಕೆಯನ್ನು ತಡವಾಗಿ ದಾಖಲು ಮಾಡಿಕೊಳ್ಳಲಾಗಿದೆ ಶವಪರೀಕ್ಷೆಯನ್ನು ಸಹ ವಿಳಂಬವಾಗಿ ಮಾಡಲಾಗಿದೆ. ಪ್ರತ್ಯಕ್ಷ ಸಾಕ್ಷಿದಾರರನ್ನು ತನಿಖಾಧಿಕಾರಿಗಳೇ ಸೃಷ್ಟಿ ಮಾಡಿದ್ದಾರೆ. ಪ್ರಕರಣದಲ್ಲಿ ಇತರೆ ಆರೋಪಿಗಳೊಂದಿಗೆ ತಾನು ಯಾವುದೇ ಒಳಸಂಚು ರೂಪಿಸಿದೆ. ತನಿಖೆ ಈಗಾಗಲೇ ಪೂರ್ಣಗೊಂಡಿದ್ದು, ಹೆಚ್ಚಿನ ತನಿಖೆ ಅಗತ್ಯ ಇಲ್ಲವಾಗಿದೆ. ಹಾಗೆಯೇ, ತಾನು ಬೆನ್ನುಹುರಿ ನೋವಿನಿಂದ ಬಳಲುತ್ತಿದ್ದು, ಅಗತ್ಯ ಚಿಕಿತ್ಸೆ ಪಡೆಯಲು ಜಾಮೀನು ಮಂಜೂರು ಮಾಡಬೇಕು ಎಂದು ಅರ್ಜಿಯಲ್ಲಿ ಕೋರಿದ್ದರು.
Post a comment
Log in to write reviews