
ಬೆಂಗಳೂರು : ಕೊಲೆ ಆರೋಪದ ಮೇಲೆ ಜೈಲು ಸೇರಿರುವ ನಟ ದರ್ಶನ್ ಅಭಿಮಾನಿ ಇತರ ಅಭಿಮಾನಿಗಳಿಗೆ ಪ್ರಚೋದಿಸುತ್ತಿದ್ದ ಆರೋಪದಲ್ಲಿ ಅಭಿಮಾನಿ ಚೆತನ್‌ನನ್ನು ಬಂಧಿಸಲಾಗಿದೆ.
ಜೈಲು ಸೇರಿದ ನಟ ದರ್ಶನ್ ಬಗ್ಗೆ ಉಮಾಪತಿ ಗೌಡ ಮಾಧ್ಯಮದವರೊಂದಿಗೆ ಮಾತಾಡಿದ್ದರು. ಈ ಬಗ್ಗೆ ನಟ ದರ್ಶನ್ ಫ್ಯಾನ್ ಆಗಿರುವ ಚೇತನ್ ಕೋಪಗೊಂಡಿದ್ದು ಡಿ ಬಾಸ್ ಬಗ್ಗೆ ಮಾತನಾಡುತ್ತೀರಾ ಎಂದು ರೊಚ್ಚಿಗೆದ್ದು ಉಮಾಪತಿ ಗೌಡಗೆ ಬೆದರಿಕೆ ಹಾಕಿದ್ದಲ್ಲದೇ ಅವಹೇಳನಕಾರಿಯಾಗಿ ಮಾತನಾಡಿದ್ದ. ಹಾಗೂ ದರ್ಶನ್ ಇತರೆ ಅಭಿಮಾನಿಗಳಿಗೆ ಪ್ರಚೋದಿಸುತ್ತಿದ್ದ. ಈ ಬಗ್ಗೆ ನಿರ್ಮಾಪಕ ಉಮಾಪತಿ ಗೌಡ ದೂರು ನೀಡಿದ್ದಾರೆ. ಸದ್ಯ ಬಸವೇಶ್ವರ ನಗರ ಪೊಲೀಸರು ಚೇತನ್‌ನನ್ನು ಬಂಧಿಸಿ ಐಪಿಸಿ ಸೆಕ್ಷನ್ 504, 506 ಅಡಿ ಎಫ್ಐಆರ್ ದಾಖಲಿಸಿ, ವಿಚಾರಣೆ ನಡೆಸಿದ್ದಾರೆ.
Poll (Public Option)

Post a comment
Log in to write reviews