ಟಾಪ್ 10 ನ್ಯೂಸ್
ರೇಣುಕಾಸ್ವಾಮಿ ಕೊಲೆಯಲ್ಲಿ ದರ್ಶನ್ ಪಾತ್ರ : ಮಾಹಿತಿ ಬಿಚ್ಚಿಟ್ಟ ಕಮಿಷನರ್ ದಯಾನಂದ್!

ಅಪರಿಚಿತ ಶವ ಪತ್ತೆ ಪ್ರಕರಣದಲ್ಲಿ ಕನ್ನಡ ಚಲನ ಚಿತ್ರರಂಗದ ನಟ ದರ್ಶನ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ತಿಳಿಸಿದ್ದಾರೆ.
ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಳೆದ ಭಾನುವಾರ(09-06-2024) ರಂದು ಕಾಮಾಕ್ಷಿ ಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿತ್ತು. ಈ ಪ್ರಕರಣ ಸಂಬಂಧ ನಟನನ್ನು ಪ್ರಶ್ನೆ ಮಾಡಲಾಗುತ್ತಿದೆ. ಶವವಾಗಿ ಪತ್ತೆಯಾದವರು ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ. ಈ ಘಟನೆಗೆ ಸಿಕ್ಕ ಸಾಕ್ಷ್ಯಗಳು ಹಾಗೂ ಸಿಸಿ ಟಿವಿ ದೃಶ್ಯಾವಳಿಗಳ ಅಧಾರದ ಮೇಲೆ ನಟ ದರ್ಶನ್ ಹಾಗೂ ಆತನ 10 ಕ್ಕೂ ಹೆಚ್ಚು ಜನ ಸಹಚರರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದರು.
ನಟನ ಪತ್ನಿಗೆ ಕೊಲೆಯಾದ ರೇಣುಕಾಸ್ವಾಮಿ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿನ್ನಲೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ ಎಂದರು.
Poll (Public Option)

Post a comment
Log in to write reviews