
ಬೆಂಗಳೂರು: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಡಿ.20, 21, 22 ರಂದು ಮಂಡ್ಯದಲ್ಲಿ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ ನಡೆಯಿತು. ನಂತರ ಇದರ ಬಗ್ಗೆ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು.
ಈ ಬಾರಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಡಿ.20, 21 ಮತ್ತು 22ರಂದು ಮಂಡ್ಯದಲ್ಲಿ ನಡೆಯಲಿದೆ. ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರ್ಕಾರ ಎಲ್ಲಾ ರೀತಿ ಸಹಕಾರ ನೀಡುತ್ತೆ. ಸಾಹಿತ್ಯ ಸಮ್ಮೇಳನದ ಅಧ್ಯಕ್ಷರ ಹೆಸರು ಶೀಘ್ರವೇ ಪ್ರಕಟಿಸುತ್ತೇವೆ. ಜಿಲ್ಲಾಡಳಿತ, ಸಾಹಿತ್ಯ ಪರಿಷತ್‌ನವರು ಕೆಲ ಹೆಸರುಗಳನ್ನು ನೀಡಿದ್ದಾರೆ. ಚರ್ಚೆ ಮಾಡಿ ಹೆಸರು ಅಂತಿಮಗೊಳಿಸಲಾಗುವುದು. ಎಲ್ಲರೂ ಸೇರಿ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ನಡೆಸಲು ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದರು.
Poll (Public Option)

Post a comment
Log in to write reviews