ಪಿಜಿಸಿಇಟಿಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ : ಶುಲ್ಕ ಪಾವತಿಗೂ ಅವಕಾಶ

ಬೆಂಗಳೂರು: ಎಂಬಿಎ, ಎಂಸಿಎ, ಎಂ.ಟೆಕ್ ಸೇರಿದಂತೆ ಇತರ ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸುವ ಪಿಜಿಸಿಇಟಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕವನ್ನು ಜೂನ್ 20ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಅವರು ತಿಳಿಸಿದ್ದಾರೆ.
ಶುಲ್ಕ ಪಾವತಿಸಲು ಜೂನ್ 21ವರೆಗೆ ಅವಕಾಶ ಇರುತ್ತದೆ. ಈ ಹಿಂದೆ ಪಿಜಿಸಿಇಟಿ ಪರೀಕ್ಷೆಗೆ ಮೇ 27ರಿಂದ ಜೂನ್ 17ರವರೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಆದರೆ ಈಗ ಮತ್ತೆ ಮೂರು ದಿನ ವಿಸ್ತರಣೆ ಮಾಡಲಾಗಿದೆ.
ಡಿಸಿಇಟಿ-2024ಕ್ಕೆ ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಿರುವ ಅರ್ಹ ಅಭ್ಯರ್ಥಿಗಳಿಗೆ ಪ್ರವೇಶಪತ್ರ ಡೌನ್ ಲೋಡ್ ಮಾಡಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅವಕಾಶ ಕಲ್ಪಿಸಿದೆ. ಕೆಇಎ ವೆಬ್‌ಸೈಟ್ ಗೆ ಭೇಟಿ ನೀಡಿ ನಿಗದಿತ ಲಿಂಕ್ ಅನ್ನು ಆಯ್ಕೆ ಮಾಡಿ ಅರ್ಜಿ ಸಂಖ್ಯೆ ಮತ್ತು ಅರ್ಜಿದಾರರ ಹೆಸರು ನಮೂದಿಸಿ ಡಿಸಿಇಟಿ-2024 ರ ಪ್ರವೇಶಪತ್ರ ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಮಾಹಿತಿ ನೀಡಿದ್ದಾರೆ.
Poll (Public Option)

Post a comment
Log in to write reviews