
ಬೆಂಗಳೂರು: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬ್ರಾಂಡ್ ಬೆಂಗಳೂರು ಶುಕ್ರವಾರ ಆಯೋಜಿಸಿದ್ದ ಹಸಿರೀಕರಣ ಕಾರ್ಯಕ್ರಮಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್ ಚಾಲನೆ ನೀಡಿದ್ದಾರೆ. ಕಬ್ಬನ್ ಪಾರ್ಕ್ ಬಾಲ ಭವನ ಬಳಿ ಗಿಡ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಡಿ.ಕೆ.ಶಿವಕುಮಾರ್, ಬೆಂಗಳೂರನ್ನು ಹಸಿರು ಬೆಂಗಳೂರಾಗಿ ಬದಲಾಯಿಸಬೇಕು ಅದಕ್ಕಾಗಿ ಈ ವರ್ಷ 2 ಲಕ್ಷ ಗಿಡಗಳನ್ನು ನೆಡಬೇಕು. ಇದಕ್ಕಾಗಿ ಎಲ್ಲ ಖಾಸಗಿ ಹಾಗೂ ಸರ್ಕಾರಿ ಶಾಲೆಗಳೊಂದಿಗೆ ಒಪ್ಪಂದ ಮಾಡಿಕೊಂಡಿದ್ದೆವೆ ಎಂದು ಹೇಳಿದ್ದಾರೆ. ಯಡಿಯೂರಪ್ಪ ಕೇಸ್ ಬಗ್ಗೆ ಮಾತನಾಡಿದ ಡಿಕೆಶಿ, ನನಗೆ ಆ ವಿಚಾರದ ಬಗ್ಗೆ ಗೊತ್ತಿಲ್ಲ ಕಾಂಗ್ರೆಸ್ ಯಾರ ಮೇಲೂ ದ್ವೇಷ ಮಾಡುವುದಿಲ್ಲ. ದ್ವೇಷದ ರಾಜಕಾರಣ ಮಾಡುವುದು ಬಿಜೆಪಿ ಸರ್ಕಾರ ಎಂದು ಹೇಳಿದ್ದಾರೆ. ನನಗೆ ನಂಬಿಕೆ ಇದೆ 2028ಕ್ಕೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದೇ ಬರುತ್ತೆ ನಾನು ಮತ್ತು ಸಿದ್ದರಾಯ್ಯ ಹಗಲು ರಾತ್ರಿ ದುಡಿದು ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುವಂತೆ ಮಾಡುತ್ತೇವೆ ಎಂದು ಹೇಳಿದ್ದಾರೆ.
Poll (Public Option)

Post a comment
Log in to write reviews