
ಬೆಂಗಳೂರು : ಉಪಚುನಾವಣೆಯಲ್ಲಿ ಚನ್ನಪಟ್ಟಣದ ಜನ ನನ್ನ ಮೇಲೆ ಒಲವು ತೋರಿದರೆ, ಪಕ್ಷ ತೀರ್ಮಾನಿಸಿದರೆ ನಾನು ಸ್ಪರ್ಧೆ ಮಾಡದೇ ಬೇರೆ ವಿಧಿ ಇಲ್ಲ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.
ಈ ಕುರಿತು ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣದ ಜನತೆ ನನ್ನ ಹೃದಯದಲ್ಲಿದ್ದಾರೆ. ಈ ಭಾಗದ ಜನ ಹೆಚ್ಚಿನ ಮತ ನೀಡಿ ನಮ್ಮ ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ. ನಾನು ಅವರ ಋಣ ತೀರಿಸಬೇಕು. ಕನಕಪುರ ಯಾವ ರೀತಿ ಅಭಿವೃದ್ಧಿ ಮಾಡಿದ್ದೇನೋ ಅದಕ್ಕಿಂತ ಹೆಚ್ಚಿನ ಅಭಿವೃದ್ಧಿಗೆ ಅವಕಾಶವಿದೆ. ಹೀಗಾಗಿ ಈ ಕ್ಷೇತ್ರದ ಮೇಲೆ ನನಗೆ ವಿಶೇಷವಾದ ಕಾಳಜಿ ಇದೆ. ಚನ್ನಪಟ್ಟಣ ಅಭಿವೃದ್ಧಿ ಹಾಗು ಬದಲಾವಣೆಗೆ ನಾನು ಬದ್ಧವಾಗಿದ್ದೇನೆ. ಹೀಗಾಗಿ ಇಂದು ಅಲ್ಲಿನ ದೇವಾಲಯಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿ ಮತದಾರರು ಹಾಗು ನಾಯಕರ ಜೊತೆ ಮಾತನಾಡಿದ್ದೇನೆ" ಎಂದು ತಿಳಿಸಿದರು. ಚನ್ನಪಟ್ಟಣದಲ್ಲಿ ಸಹೋದರ ಸುರೇಶ್ ಅವರ ಸ್ಪರ್ಧೆ ಬಗ್ಗೆ ಕೇಳಿದಾಗ, "ಈ ವಿಚಾರವಾಗಿ ಇನ್ನು ತೀರ್ಮಾನವಾಗಿಲ್ಲ. ನನಗೆ ಮತ ನೀಡಿ ಎಂದು ನಾನು ಅಲ್ಲಿನ ಮತದಾರರಿಗೆ ಮನವಿ ಮಾಡುತ್ತೇನೆ" ಎಂದು ತಿಳಿಸಿದರು.
Poll (Public Option)

Post a comment
Log in to write reviews