
ಬೆಂಗಳೂರು : ತೀವ್ರ ವಿರೋಧದ ನಡುವೆ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಬದಲಾವಣೆ ಮಾಡಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಿನ್ನೆ (ಜುಲೈ 26) ನಡೆದ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಇದೀಗ ಬೆಂಗಳೂರು ದಕ್ಷಿಣ ಜಿಲ್ಲೆ ಘೋಷಣೆ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಅವರು ಬ್ರ್ಯಾಂಡ್ ಬೆಂಗಳೂರಿನ ಅಭಿವೃದ್ಧಿ ಕುರಿತು ಇಂದು ಮಹತ್ವದ ಸಭೆ ನಡೆಸಲಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ 11 ಗಂಟೆಗೆ ಮೆಗಾ ಮೀಟಿಂಗ್ ನಡೆಯಲಿದ್ದು, ಬೆಂಗಳೂರಿನ ಎಲ್ಲಾ ಶಾಸಕರು ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸಿ ಬೆಂಗಳೂರಿನ ಅಭಿವೃದ್ಧಿ, ಸಮಸ್ಯೆಗೆ ಪರಿಹಾರ ಸಂಬಂಧ ಚರ್ಚಿಸಲಿದ್ದಾರೆ.
BBMP ವ್ಯಾಪ್ತಿಯ ಅಧಿಕಾರಿಗಳು, ಜಲಮಂಡಳಿ, ಬೆಸ್ಕಾಂ, ಮೆಟ್ರೋ, BDA ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಕಸ ವಿಲೇವಾರಿ, ಡೆಂಘೀ ನಿಯಂತ್ರಣ, ಮಳೆ ನೀರು ನಿರ್ವಹಣೆ ರಸ್ತೆ ನಿರ್ವಹಣೆ, ಒಳಚರಂಡಿ ವ್ಯವಸ್ಥೆ, ಪ್ರವಾಹ ಪರಿಹಾರ ಸಂಬಂಧ ಚರ್ಚೆ ನಡೆಸಲಿದ್ದಾರೆ
Poll (Public Option)

Post a comment
Log in to write reviews