
ಹಾಸನದ ಪ್ರಸಿದ್ಧ ಪುಣ್ಯಕ್ಷೇತ್ರ ಹಾಸನಾಂಬ ದೇವಾಲಯಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಇಂದು ತಮ್ಮ ಕುಟುಂಬ ಸಮೇತರಾಗಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಮಾಧ್ಯಮರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನರಿಗೆ ಸುಖ, ಶಾಂತಿ, ನೆಮ್ಮದಿಯನ್ನು ತಾಯಿ ನೀಡಲಿ ಎಂದು ಸರ್ಕಾರದ ಪರವಾಗಿ ಪ್ರಾರ್ಥನೆ ಸಲ್ಲಿಸಲು ತಾಯಿ ಹಾಸನಾಂಬ ದೇವಿಯ ದರ್ಶನಕ್ಕೆ ಬಂದಿದ್ದೇನೆ. ತಾಯಿ ಹಾಸನಾಂಬ ಆಶೀರ್ವಾದದಿಂದ ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ. ದುಃಖವನ್ನು ದೂರ ಮಾಡುವ ದುರ್ಗಾ ಮಾತೆಯಾಗಿರುವ ತಾಯಿಯು ನಾಡಿನ ಜನರಿಗೆ ಆರೋಗ್ಯ, ಐಶ್ವರ್ಯವನ್ನು ದೇವಿ ನೀಡಲಿ. ಇನ್ನು ಹಾಸನ ಜಿಲ್ಲಾಡಳಿತ ಹಾಗೂ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಉತ್ತಮವಾಗಿ ದೀಪಲಂಕಾರ, ಹೂವಿನ ಅಲಂಕಾರ ಸೇರಿದಂತೆ ದೇವಿಯ ದರ್ಶನಕ್ಕೆ ಉತ್ತಮ ವ್ಯವಸ್ಥೆ ಮಾಡಿದೆ ಎಂದು ಜಿಲ್ಲಾಡಳಿತಕ್ಕೆ ಅಭಿನಂದನೆ ತಿಳಿಸಿದರು.
Poll (Public Option)

Post a comment
Log in to write reviews