ಕಾಂಗ್ರೆಸ್ನಲ್ಲಿ ಜೋರಾಗುತ್ತಿದೆ ಡಿಸಿಎಂ ಫೈಟ್: ಶೀಘ್ರದಲ್ಲೇ ದೆಹಲಿಗೆ ಕಾಂಗ್ರೆಸ್ ನಾಯಕರು
ಬೆಂಗಳೂರು: ಕರ್ನಾಟಕ ಕಾಂಗ್ರೆಸ್ನಲ್ಲಿ ಡಿಸಿಎಂ ಸ್ಥಾನಕ್ಕಾಗಿ ಫೈಟ್ ಜೋರಾಗಿದೆ. ಹೆಚ್ಚಿನ ಡಿಸಿಎಂ ಹುದ್ದೆ ಸೃಷ್ಟಿಸುವ ಬಗ್ಗೆ ಸಚಿವ ಕೆಎನ್ ರಾಜಣ್ಣ ಹೇಳಿಕೆ ನೀಡಿದ ಬೆನ್ನಲ್ಲೇ ಒಬ್ಬೊಬ್ಬರಾಗಿ ಕಾಂಗ್ರೆಸ್ ನಾಯಕರು ಪ್ರತಿಕ್ರಿಯೆ ನೀಡಲು ಆರಂಭಿಸಿದ್ದಾರೆ. ಜೊತೆಗೆ, ಕಾಂಗ್ರೆಸ್ ನಾಯಕರು ಶೀಘ್ರದಲ್ಲೇ ದೆಹಲಿಗೆ ತೆರಳಿ ಹೈಕಮಾಂಡ್ ಜೊತೆ ಮಾತುಕತೆ ನಡೆಸುವ ಸಾಧ್ಯತೆ ಇದೆ.
ಈಗಾಗಲೇ ಸಚಿವ ಸತೀಶ್ ಜಾರಕಿಹೊಳಿ ದೆಹಲಿಗೆ ತೆರಳಿದ್ದಾರೆ. ಇತರೆ ನಾಯಕರೂ ಹೈಕಮಾಂಡ್ ಭೇಟಿಯಾಗುವ ಸಾಧ್ಯತೆ ಇದೆ. ಡಿಸಿಎಂ ಹುದ್ದೆ ವಿಚಾರವಾಗಿ ಲೋಕಸಭೆ ಚುನಾವಣೆ ಬಳಿಕ ಚರ್ಚಿಸೋಣ ಎಂದು ವರಿಷ್ಠರು ಕಾಂಗ್ರೆಸ್ ನಾಯಕರಿಗೆ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ವರಿಷ್ಠರ ಭೇಟಿಗೆ ಸತೀಶ್ ಹಾಗೂ ಬಣ ಯತ್ನಿಸುತ್ತಿದೆ.
ಈ ಮಧ್ಯೆ, ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ರಾಜಣ್ಣ ಹೇಳಿಕೆಗೆ ಸೋಮವಾರ ವಿಧಾನಸೌಧದಲ್ಲಿ ಸಚಿವ ಪ್ರಿಯಾಂಕ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ವರಿಷ್ಠರ ಬಳಿ ಹೋಗಿ ಕೇಳಲಿ, ಯಾರೂ ಬೇಡ ಅಂದಿಲ್ಲ. ಸಿಎಂ ಹುದ್ದೆಯನ್ನೂ ಕೇಳಲಿ, ಯಾರು ಬೇಡ ಅಂದವರು ಎಂದು ಪ್ರಿಯಾಂಕ್ ಖರ್ಗೆ ಖಾರವಾಗಿ ಪ್ರಶ್ನಿಸಿದ್ದಾರೆ.
Post a comment
Log in to write reviews