
ಬಿಹಾರ: ಹಾಸ್ಟೆಲ್ ಊಟದಲ್ಲಿ ಸತ್ತ ಹಾವು ಪತ್ತೆಯಾಗಿರುವ ಘಟನೆ ಬಿಹಾರದ ಬಂಕಾದ ಲಾಡಿಕೋಲಾದಲ್ಲಿರುವ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದೆ.
ರಾತ್ರಿ ವಿದ್ಯಾರ್ಥಿಗಳು ಹಾಸ್ಟೆಲ್ ನಲ್ಲಿ ಊಟ ಮಾಡಿದ್ದಾರೆ, ಊಟ ಮಾಡಿದ ಬಳಿಕ 10 ವಿದ್ಯಾರ್ಥಿಗಳ ಆರೋಗ್ಯ ಹಠಾತ್ ಹದಗೆಟ್ಟಿದೆ. ಕೂಡಲೇ ಅವರನ್ನೆಲ್ಲ ಸ್ಥಳಿಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಸ್ವಸ್ಥರನ್ನು ಪರೀಕ್ಷಿಸಿದ ವೈದ್ಯರು, ವಿದ್ಯಾರ್ಥಿಗಳಿಗೆ ಫುಡ್ ಪಾಯ್ಸನ್ ಆಗಿದೆ ಎಂದು ತಿಳಿಸಿದ್ದಾರೆ.
ಆಹಾರದಲ್ಲಿ ಸತ್ತ ಹಾವು ಇತ್ತು. ಹೀಗಾಗಿ ಈ ಆಹಾರವನ್ನು ತಿಂದ ಬಳಿಕ ವಿದ್ಯಾರ್ಥಿಗಳಿಗೆ ಹೊಟ್ಟೆನೋವು ಕಾಣಿಸಿಕೊಂಡಿದೆ ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ. ಈ ಬಗ್ಗೆ ಕಾಲೇಜು ಆಡಳಿತ ಮಂಡಳಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳು ಕಾಲೇಜು ಗೇಟ್ ಬಳಿ ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ ತಪ್ಪಿತಸ್ಥರ ವಿರುದ್ಧ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ, ಪ್ರಕರಣದ ತನಿಖೆಗೆ ಆದೇಶಿಸಿದ್ದಾರೆ.
Poll (Public Option)

Post a comment
Log in to write reviews