
ಮೈಸೂರು : ಕೆ.ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಓವ೯ ಯುವಕ ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳ ಜೊತೆ ದೂರವಾಣಿ ಮೂಲಕ ಸಂಭಾಷಣೆ ನಡೆಸಿ ಮಾಹಿತಿ ತಿಳಿದುಕೊಂಡರು.
ನೀರು ಕಲುಷಿತಗೊಳ್ಳಲು ಕಾರಣ ಏನು ಮತ್ತು ಯಾರು ಪತ್ತೆಹಚ್ಚಿ ಸೂಕ್ತಕ್ರಮ ಕೈಗೊಳ್ಳುವಂತೆ ಸಿಎಂ ಅಧಿಕಾರಿಗಳಿಗೆ ಹೇಳಿದರು, ಕಲುಷಿತ ನೀರು ಸೇವನೆಯಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ರೋಗಿಗಳಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡುವಂತೆ ಸೂಚಿಸಿದರು.
Poll (Public Option)

Post a comment
Log in to write reviews