ಕ್ಲೌಡ್ ನೈನ್ ಆಸ್ಪತ್ರೆ ನಿಲ೯ಕ್ಷಕ್ಕೆ ಪತ್ನಿ ಸಾವು : ಪತಿ ಕೇಶವ್ ಆರೋಪ.

ಬೆಂಗಳೂರು : ಹೆರಿಗೆ ನಂತರ ಆಸ್ಪತ್ರಗೆ ದಾಖಲಾಗಿದ್ದ ಬಾಣಂತಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಡೆದಿದೆ.
ಮೃತ ಬಾಣಂತಿ 33 ವಷ೯ದ ಜನನಿ. ಮಣಿಪಾಲ್ ಆಸ್ಪತ್ರೆಯ ವೈದ್ಯರ ವಿರುದ್ಧ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಕ್ಲೌಡ್ ನೈನ್ ಆಸ್ಪತ್ರೆಯಲ್ಲಿ ಐವಿಎಫ್ ಮೂಲಕ ಜನನಿ ಹಾಗೂ ಕೇಶವ್ ದಂಪತಿ ಅವಳಿ ಮಕ್ಕಳನ್ನು ಪಡೆದಿದ್ದರು. ಹೆರಿಗೆ ನೋವು ಕಾಣಿಸಿಕೊಂಡಿದ್ದರಿಂದ ಮೇ 2 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗಾಗಿ ದಂಪತಿ ಹೆರಿಗೆ ಪ್ಯಾಕೇಜ್ ಮಾಡಿಸಿದ್ದರು. ಜನನಿಗೆ ಅವಧಿ ಪೂವ೯ ಹೆರಿಗೆ ಆಗಿತ್ತು ಆಕೆಗೆ ಜಾಂಡೀಸ್ ಮತ್ತು ಲಿವರ್ ಸಮಸ್ಯೆ ಇದೆ ಎಂದು ವೈದ್ಯರು ಹೇಳಿದ್ದಾರೆ. ಪರಿಸ್ಥಿತಿ ಗಂಭೀರವಾಗಿದ್ದರಿಂದ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಮೇ22 ರಂದು ಜನನಿ ಸಾವನ್ನಪ್ಪಿದ್ದಾರೆ.
ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ 30 ಲಕ್ಷ ಬಿಲ್ ಆಗಿದ್ದು, ಈ ಬಿಲ್ ಪಾವತಿಸಿ ಮೃತದೇಹ ತೆಗೆದುಕೊಂಡು ಹೋಗಿ ಎಂದು ಅಲ್ಲಿನ ಸಿಬ್ಬಂದಿ ಹೇಳಿದ್ದಾರೆ. ಆದರೆ ಕ್ಲೌಡ್‌ನೈನ್ ಆಸ್ಪತ್ರೆಯವರ ನಿರ್ಲಕ್ಷ್ಯಕ್ಕೆ ಜನನಿ ಸಾವಾಗಿದೆ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಬಿಲ್ ಅನ್ನು Cloud Nine ಆಸ್ಪತ್ರೆಯೇ ಪಾವತಿಸಬೇಕೆಂದು ಕುಟುಂಬಸ್ಥರು ಪಟ್ಟು ಹಿಡಿದಿದ್ದಾರೆ. ಈ ಘಟನೆಗೆ ಸಂಬಧಿಸಿದಂತೆ ಜೆ.ಪಿ.ನಗರ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
Poll (Public Option)

Post a comment
Log in to write reviews