ವಯನಾಡ್: ಕೇರಳದ ವಯನಾಡ್ ಜಿಲ್ಲೆಯ ಮುಂಡಕೈ ಪ್ರದೇಶದಲ್ಲಿ ಶುಕ್ರವಾರ 18 ಮೃತದೇಹಗಳು ಪತ್ತೆಯಾಗಿದ್ದು, ಚಲಿಯಾರ್ ನದಿಯಿಂದ 5 ಮೃತದೇಹಗಳು ಹಾಗೂ 10 ಮೃತ ದೇಹಗಳನ್ನು ಹೊರತೆಗೆಯಲಾಗಿದೆ. ಇದರಿಂದಾಗಿ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 330 ಕ್ಕೆ ಏರಿಕೆಯಾಗಿದೆ. ಇನ್ನೂ 280 ಮಂದಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.
ಭಾರತೀಯ ಸೇನೆ, ನೌಕಾದಳ, ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವ ಹಲವು ವಿಭಾಗಗಳು ಸೇರಿದಂತೆ ಒಟ್ಟು 640 ತಂಡಗಳು ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿವೆ. ಸೇನಾ ಹೆಲಿಕಾಪ್ಟರ್ಗಳ ಹೊರತಾಗಿ, ಪೊಲೀಸ್ ಇಲಾಖೆಯಿಂದ ನಿಯೋಜಿಸಲ್ಪಟ್ಟ ಹೆಲಿಕಾಪ್ಟರ್ ಗಳೂ ಸಹ ಚಲಿಯಾರ್ ಸ್ಥಳಗಳಲ್ಲಿ ತಪಾಸಣೆ ನಡೆಸಿವೆ.
84 ಮಂದಿಗೆ ವಯನಾಡ್, ಕೋಝಿಕ್ಕೋಡ್, ಮಲಪ್ಪುರಂ ಜಿಲ್ಲೆಗಳ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, 187 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದೆ.
ಇನ್ನು ಕೇರಳ ಕಾರ್ಮಿಕ ಸಚಿವರ ಮಾಹಿತಿಯ ಪ್ರಕಾರ ವಯನಾಡ್ ನಲ್ಲಿ ಬಂಗಾಳದ ಒಟ್ಟು 242 ಕಾರ್ಮಿಕರು ಸಿಲುಕಿದ್ದು, ಈ ಪೈಕಿ 200 ಕಾರ್ಮಿಕರನ್ನು ಸಂಪರ್ಕಿಸಲಾಗಿದೆ. ಅವರು ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Post a comment
Log in to write reviews