
ಹಾಸನ: ಸಾಲಭಾದೆ ತಾಳಲಾರದೆ ಒಂದೇ ಕುಟುಂಬದ ದಂಪತಿ ಹಾಗೂ 13 ವರ್ಷದ ಮಗಳೊಂದಿಗೆ ಹೇಮಾವತಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕೆರೆಬೀದಿಯಲ್ಲಿ ಈ ಘಟನೆ ನಡೆದಿದೆ. ಶ್ರೀನಿವಾಸ್ (43), ಶ್ವೇತಾ (36) ಹಾಗೂ ನಾಗಶ್ರೀ (13) ಮೃತ ದುರ್ದೈವಿಗಳು. ಶ್ರೀನಿವಾಸ್ ಕಾರು ಚಾಲಕರಾಗಿದ್ದು, ಶ್ವೇತಾ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು. ಶ್ರೀನಿವಾಸ್ ಸಾಕಷ್ಟು ಸಾಲ ಮಾಡಿಕೊಂಡಿದ್ದರು. ಕಳೆದ ಮಂಗಳವಾರ ಈ ಮೂವರು ಏಕಾಏಕಿ ಕಾಣಿಯಾಗಿದ್ದರು. ಸಂಬಂಧಿಗಳು ಎಲ್ಲೆಡೆ ಹುಡುಕಾಟ ನಡೆಸಿದ್ದರು. ಆದರೆ ಇವರ ಸುಳಿವು ಸಿಕ್ಕಿರಲಿಲ್ಲ.
ಕುಟುಂಬಸ್ಥರು ನಂತರ ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ನಿನ್ನೆ ಬುಧವಾರ ಸಂಜೆ ಬಾಗೂರು ಹೋಬಳಿ, ಮುದ್ಲಾಪುರ ಬಳಿಯ ನಾಲೆಯಲ್ಲಿ ಶ್ರೀನಿವಾಸ್, ಶ್ವೇತಾ ಶವ ಪತ್ತೆಯಾಗಿದೆ. ಹೇಮಾವತಿ ನಾಲೆಗೆ ಹಾರಿ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ ಎನ್ನಲಾಗಿದೆ.
ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ದಂಪತಿಯ ಶವವನ್ನು ಹೊರ ತೆಗೆದಿದ್ದು, ಸದ್ಯ ಬಾಲಕಿ ನಾಗಶ್ರೀ ಮೃತದೇಹಕ್ಕಾಗಿ ಶೋಧಕಾರ್ಯ ಮುಂದುವರಿದಿದೆ. ಸ್ಥಳಕ್ಕೆ ಎಸ್‌ಪಿ ಮಹಮದ್ ಸುಜೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನುಗ್ಗೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Poll (Public Option)

Post a comment
Log in to write reviews