ಟಾಪ್ 10 ನ್ಯೂಸ್
ವಿಶ್ವೇಶ್ವರಯ್ಯ ನಾಲೆ ದುರಸ್ತಿ ವಿಳಂಬ ಸಹಿಸಲ್ಲ - ಸಚಿವ ಚಲುವರಾಯಸ್ವಾಮಿ ಎಚ್ಚರಿಕೆ!

ಮಂಡ್ಯ : ಮಂಡ್ಯ ಜಿಲ್ಲೆಯ ರೈತರ ಜೀವನಾಡಿಯಾಗಿರುವ ವಿಶ್ವೇಶ್ವರಯ್ಯ ನಾಲೆ ದುರಸ್ತಿ ಕಾಮಗಾರಿಯಲ್ಲಿ ವಿಳಂಬ ಸಹಿಸುವುದಿಲ್ಲ ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
ಕೆ.ಆರ್.ಎಸ್ ಬೃದಾವನ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆಯ ನಂತರ ವಿಶ್ವೇಶ್ವರಯ್ಯ ಮುಖ್ಯನಾಲೆ ಸರಪಳಿ 0.00 ದಿಂದ 46.25 ಕಿ.ಮೀ ವರಗಿನ ನಾಲೆ ಆಧುನೀಕರಣ ಕಾಮಗಾರಿ ಪರಿಶೀಲಿಸಿ ಸಚಿವರು ಅಧಿಕಾರಿಗಳಿಗೆ ಹಲವು ಸಲಹೆ ಸೂಚನೆಗಳನ್ನು ನೀಡಿದರು.
ನಿಗಧಿತ ಅವಧಿಯೊಳಗೆ ನಾಲೆ ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಳಿಸಬೇಕು. ಕಳಪೆ ಕೆಲಸ ಕಂಡು ಬಂದರೆ ಗುತ್ತಿಗೆದಾರರು ಹಾಗೂ ಅಧಿಕಾರಿಗಳನ್ನು ಹೊಣೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಇದೇ ವೇಳೆ ಸ್ಥಳೀಯ ರೈತರ ಅಭಿಪ್ರಾಯ ಆಲಿಸಿದ ಸಚಿವರು ಕೃಷಿಕರ ಹಿತಕ್ಕಾಗಿ ಹೆಚ್ಚಿನ ಅನುದಾನ ತಂದು ಕಾಮಗಾರಿ ನಡೆಸಲಾಗುತ್ತಿದೆ. ಜಿಲ್ಲೆಯ ಸಮಗ್ರ ಅಭಿವೃದ್ಧಿ ತಮ್ಮ ಆಶಯವಾಗಿದ್ದು ಅದಕ್ಕೆ ಜನರ ಸಹಕಾರವೂ ಅಗತ್ಯ ಎಂದು ಮನವರಿಕೆ ಮಾಡಿಕೊಟ್ಟರು.
Poll (Public Option)

Post a comment
Log in to write reviews