
ದೆಹಲಿ: ರಕ್ತದಲ್ಲಿ ಸಕ್ಕರೆ ಪ್ರಮಾಣ ಕಡಿಮೆಯಾದ ಕಾರಣ ದೆಹಲಿ ಜಲ ಸಚಿವೆ ಅತಿಶಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ದೆಹಲಿಗೆ ಸಮರ್ಪಕ ನೀರು ಒದಗಿಸುವಂತೆ ಒತ್ತಾಯಿಸಿ ಭೋಗಲ್‌ನಲ್ಲಿ ಕಳೆದ ನಾಲ್ಕು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಜಲ ಸಚಿವೆ ಅತಿಶಿ ಅವರ ಆರೋಗ್ಯ ಹೆದಗೆಟ್ಟ ಕಾರಣ ಎಲ್ಎನ್‌ಜಿಪಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಆರೋಗ್ಯ ತಪಾಸಣೆ ನಡೆಸಿದ್ದಾಗ, ಅವರ ಆರೋಗ್ಯ ಕ್ಷೀಣಿಸುತ್ತಿರುವುದನ್ನು ಕಂಡ ವೈದ್ಯರು ಆಸ್ಪತ್ರೆಗೆ ದಾಖಲಾಗುವಂತೆ ಸಲಹೆ ನೀಡಿದ್ದರು ಆದರೆ ಅತಿಶಿ ನಿರಾಕರಿಸಿದ್ದರು. ಸೋಮವಾರ ರಾತ್ರಿ ಅವರ ರಕ್ತದಲ್ಲಿ ಸಕ್ಕರೆ ಪ್ರಮಾಣ 36ಕ್ಕೆ ಕುಸಿದೆ, ಹಾಗಾಗಿ ಮಂಗಳವಾರ ಮುಂಜಾನೆ, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಳೆದ ಐದು ದಿನಗಳಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಜೂನ್ 21ರಿಂದ ಅತಿಶಿಯವರ ತೂಕ ಇಳಿಕೆಯಾಗುತ್ತಿದ್ದು, ನಾಲ್ಕು ದಿನಗಳಲ್ಲಿ 2.2 ಕೆಜಿ ತೂಕ ಇಳಿಕೆಯಾಗಿದೆ. ರಕ್ತದೊತ್ತಡ ಮತ್ತು ಸಕ್ಕರೆ ಮಟ್ಟವು ಕುಸಿಯುತ್ತಿದೆ ಅಲ್ಲದೆ ತೂಕವು ಕಡಿಮೆಯಾಗಿದೆ. ದೇಹದಲ್ಲಿ ಕೀಟೋನ್ ಮಟ್ಟವು ತುಂಬಾ ಹೆಚ್ಚಾಗಿದೆ, ಇದು ದೀರ್ಘಾವಧಿಯಲ್ಲಿ ಹಾನಿಕಾರಕ ಪರಿಣಾಮಗಳನ್ನು ಉಂಟುಮಾಡುತ್ತದೆ ಎಂದು ಅತಿಶಿ ಹೇಳಿಕೊಂಡಿದ್ದಾರೆ.
ನನ್ನ ದೇಹವು ಎಷ್ಟೇ ನರಳಿದರೂ ಹರಿಯಾಣ ನೀರು ಬಿಡುವವರೆಗೆ ನಾನು ಉಪವಾಸವನ್ನು ಮುಂದುವರಿಸುತ್ತೇನೆ ಎಂದು ಹೇಳಿದರು. ದೆಹಲಿಯು ನೀರಿನ ಕೊರತೆಯನ್ನು ಎದುರಿಸುತ್ತಿರುವಾಗ, ಬಿಜೆಪಿ ನೇತೃತ್ವದ ಹರಿಯಾಣ ಸರ್ಕಾರವು ದಿನಕ್ಕೆ 100 ಮಿಲಿಯನ್ ಗ್ಯಾಲನ್ (ಎಂಜಿಡಿ) ನೀರನ್ನು ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪಿಸಿದರು.
ಇದು ರಾಷ್ಟ್ರರಾಜಧಾನಿಯಲ್ಲಿ 28 ಲಕ್ಷಕ್ಕೂ ಹೆಚ್ಚು ಜನರ ಮೇಲೆ ಪರಿಣಾಮ ಬೀರಿದೆ. ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚಿನ ತಾಪಮಾನ ಮತ್ತು ಶಾಖದ ಅಲೆಗಳೊಂದಿಗೆ ನೀರಿನ ಕೊರತೆಯ ಸಮಸ್ಯೆ ಉದ್ಭವಿಸಿದೆ. ದೆಹಲಿ ಜನರು ತಮ್ಮ ದೈನಂದಿನ ನೀರಿನ ಅವಶ್ಯಕತೆಗಳನ್ನು ಪಡೆಯಲು ನೀರಿನ ಟ್ಯಾಂಕರ್‌ಗಳ ಮೊರೆ ಹೋಗಿದ್ದಾರೆ ಎಂದು, ಸಚಿವೆ ಅತಿಶಿ ಬೇಸರ ಹೊರ ಹಾಕಿದ್ದಾರೆ.
Poll (Public Option)

Post a comment
Log in to write reviews