ರಾಜ್ಯದಲ್ಲಿ ಸರಣಿಯವಾಗಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 91 ಹೊಸ ಡೆಂಗ್ಯೂ ಪ್ರಕರಣಗಳು ಕಂಡು ಬಂದಿದೆ. ರಾಜ್ಯದಲ್ಲಿ ಈವರೆಗೆ ಒಟ್ಟು 29,611 ಪ್ರಕರಣಗಳು ದಾಖಲಾಗಿದ್ದು, 683 ಪ್ರಕರಣಗಳು ಸಕ್ರಿಯವಾಗಿವೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಕಳೆದ 24 ಗಂಟೆಯಲ್ಲಿ 38 ಡೆಂಗ್ಯೂ ಪ್ರಕರಣ ವರದಿಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರಲ್ಲಿ ಜನವರಿಯಿಂದ ಇಲ್ಲಿಯವರೆಗೆ 9,035 ಡೆಂಗ್ಯೂ ಕೇಸ್ಗಳು ವರದಿಯಾಗಿವೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆರೋಗ್ಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿದ ಸೊಳ್ಳೆಗಳ ಲಾರ್ವಾಗಳು ಕೊಚ್ಚಿಕೊಂಡು ಹೋಗುತ್ತಿದೆ. ಹೀಗಾಗಿ ದೈನಂದಿನ ಸರಾಸರಿ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿವೆ ಎಂದು ಹೇಳಿದ್ದಾರೆ.
Post a comment
Log in to write reviews