ಡೆಂಗ್ಯೂ ಈಗ ಸಾಂಕ್ರಾಮಿಕ ರೋಗ: ಸೊಳ್ಳೆಗಳ ನಿಯಂತ್ರಣ ಮಾಡದಿದ್ದರೆ ದಂಡಾಸ್ತ್ರ ಪ್ರಯೋಗ
ಬೆಂಗಳೂರು: ಡೆಂಗ್ಯೂ ಜ್ವರವನ್ನು ಸಾಂಕ್ರಾಮಿಕ ರೋಗ ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಸಾಂಕ್ರಾಮಿಕ ರೋಗಗಳ ಕಾಯಿದೆ 2020 ತಿದ್ದುಪಡಿ ಮಾಡಿ ಅಧಿಸೂಚನೆ ಹೊರಡಿಸಲಾಗಿದೆ.
ಅಧಿಸೂಚನೆ ಉಲ್ಲಂಘನೆ ಆದರೆ ದಂಡ ನಿಗದಿ ಮಾಡಿಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಸೂಚನೆ ನೀಡಿದೆ. ಡೆಂಗ್ಯೂ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಕ್ರಮವಹಿಸಲಾಗಿದೆ. ಸೊಳ್ಳೆಗಳ ನಿಯಂತ್ರಣ ಮಾಡದಿದ್ದರೆ ದಂಡಾಸ್ತ್ರ ಪ್ರಯೋಗ ಮಾಡಲಾಗುತ್ತದೆ.
ಡಿಸಿಗಳಿಗೆ ಅಧಿಕಾರ
ಡೆಂಗ್ಯೂ ರೋಗವನ್ನು ಸಾಂಕ್ರಾಮಿಕ ರೋಗ ಪಟ್ಟಿಗೆ ಸೇರಿಸಿದ್ದೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಜನರಿಗೆ ಜಾಗೃತಿ ಮೂಡಿಸಿ, ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ತಿಳಿಸಿದ್ದೀವಿ.ಆದರೆ ಇದುವರೆಗೆ ನಮಗೆ ಯಾವ ಕ್ರಮ ಕೈಗೊಳ್ಳಲು ಸಾಧ್ಯವಾಗಿಲ್ಲ. ಮಂಗಳೂರು, ಬೆಂಗಳೂರಿನಲ್ಲಿ ಮಾತ್ರ ಪಾಲಿಕೆಗಳು ಕೆಲ ಕ್ರಮ ತೆಗೆದುಕೊಳ್ಳುವ ಅವಕಾಶ ಇತ್ತು, ಬೇರೆ ಕಡೆ ಇರಲಿಲ್ಲ. ಇದೀಗ ಡೆಪ್ಯುಟಿ ಕಮೀಷನರ್, ಡಿಸಿಗಳು ಇನ್ನು ಮುಂದೆ ಕ್ರಮ ತೆಗೆದುಕೊಳ್ಳುವ ಅಧಿಕಾರ ನೀಡಿದ್ದೇವೆ. ಮನೆ, ಸಂಸ್ಥೆ, ಕಟ್ಟಡಗಳು, ನಿರ್ಮಾಣ ಹಂತದ ಸೈಟ್, ಹೋಟೆಲ್ ಹೀಗೆ ಹಲವು ಸ್ಥಳಗಳ ಸುತ್ತಮುತ್ತ ಸರಿಯಾದ ನಿರ್ವಹಣೆ ಮಾಡದಿದ್ದರೆ ದಂಡ ವಿಧಿಸಲಾಗುತ್ತದೆ.
ಆ ಪ್ರಕಾರ ಗ್ರಾಮೀಣ ಪ್ರದೇಶಗಳ ಮನೆಗಳಿಗೆ 200 ರೂ. ದಂಡ, ನಗರ ಪ್ರದೇಶಗಳ ಮನೆಗಳಿಗೆ 400 ರೂ., ನಗರ ಪ್ರದೇಶದ ವಾಣಿಜ್ಯ ಪ್ರದೇಶ, ಮಾಲ್, ಮಾರುಕಟ್ಟೆಗಳಿಗೆ 1 ಸಾವಿರ ರೂ, ಗ್ರಾಮೀಣ ಪ್ರದೇಶಗಳಲ್ಲಿ 500 ರೂ ದಂಡ ವಿಧಿಸಲಾಗಹಿದೆ. ಖಾಲಿ ಸ್ಥಳ, construction ಸೈಟ್ ( ನಗರ ಪ್ರದೇಶ) 2 ಸಾವಿರ ರೂ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 1 ಸಾವಿರ ರೂ ದಂಡ ಇರಲಿದೆ
Post a comment
Log in to write reviews