2024-12-24 06:53:19

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಸಿಎಂ ವಿರುದ್ಧ ಅವಹೇಳನಾಕಾರಿ ಭಾಷಣ: ಸಿಟಿ ರವಿ ವಿರುದ್ಧ ಕೇಸ್  ದಾಖಲು

ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ‌ ಭಾಷಣ ಮಾಡಿರುವ ಹಿನ್ನೆಲೆ ಬಿಜೆಪಿ ನಾಯಕ ಸಿ.ಟಿ ರವಿ ವಿರುದ್ಧ ದೂರು ದಾಖಲಾಗಿದೆ. 

ಬೆಂಗಳೂರಿನ ಫ್ರೀಡಂ ಪಾರ್ಕ್‌ ನಲ್ಲಿ ಬಿಜೆಪಿ ನಾಯಕರು ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ವಿರೋಧಿಸಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಸಿ.ಟಿ ರವಿ ಮಾತನಾಡಿ ‘ಮೂರು ಬಿಟ್ಟವರು ಭಂಡತನದ ಸಮರ್ಥನೆ ಮಾಡೋದು. ಭಂಡತನದ ಸಮರ್ಥನೆ ಬಿಟ್ಟು ಯಾಕೆ ಸೆಸ್ ಹಾಕೀರೋದು ಎಂದು ಹೇಳಲಿ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದರು. ಈ ಹಿನ್ನಲೆ ಸಿ.ಟಿ ರವಿ ಸಿದ್ದರಾಮಯ್ಯರನ್ನ ಟೀಕಿಸಿ ಅಗೌರವ ತೋರಿದ್ದಾರೆ. ಎಂದು ರಾಜ್ಯ ಬಾಲವಿಕಾಸ ಅಕಾಡೆಮಿ ಮಾಜಿ ಅಧ್ಯಕ್ಷ ವೇದವ್ಯಾಸ ಕೌಲಗಿ ಅವರು ಮಾನನಷ್ಟ ಮೊಕದ್ದಮೆ ಹೂಡುವಂತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Post a comment

No Reviews