
ಮಂಗಳೂರು: ನನ್ನ ತಮ್ಮನಿಗೆ ಚುನಾವಣೆಯಲ್ಲಿ ಆಸಕ್ತಿ ಇಲ್ಲ. ಜನ ನಮಗೆ ವಿಶ್ರಾಂತಿ ನೀಡಲು ಹೇಳಿದ್ದಾರೆ. ಆದರೆ ಚನ್ನಪಟ್ಟಣ ಜನಕ್ಕೆ ಅಳಿಲು ಸೇವೆ ಮಾಡುವ ಆಸೆ ಇದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಬಳಿ ಮಾತನಾಡಿದ ಅವರು, ಚನ್ನಪಟ್ಟಣ ಉಪಚುನಾವಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು ದೇವರು ನಮಗೆ ಈಗ ಅಧಿಕಾರ ಕೊಟ್ಟಿದ್ದಾರೆ. 136 ಸೀಟ್ ಕೊಟ್ಟಿದ್ದಾರೆ, ಅದನ್ನು ಉಳಿಸಿಕೊಳ್ಳಬೇಕು. ಚನ್ನಪಟ್ಟಣ ಜನಕ್ಕೆ ಏನೂ ಆಗಿಲ್ಲ ಎಂಬ ಭಾವನೆ ಇದೆ. ನಾವು ಒಂದಷ್ಟು ಅಳಿಲು ಸೇವೆ ಮಾಡಬೇಕೆಂದು ಇದ್ದೇವೆ. ನಾವು ಅಧಿಕಾರ ಇದ್ದಾಗ ಮಾಡಿದ್ದೇವೆ. ಇದೀಗ ಸರಿಯಾದ ಸಮಯ. ಏನೋ ಒಂದು ಸಹಾಯ ಮಾಡಬೇಕೆಂದುಕೊಂಡಿದ್ದೇವೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
Poll (Public Option)

Post a comment
Log in to write reviews