
ಹುಬ್ಬಳ್ಳಿ: ಹತ್ಯೆಗೀಡಾದ ಇಬ್ಬರು ಯುವತಿಯರ ಕುಟುಂಬಗಳನ್ನು ಭೇಟಿ ಮಾಡಿ ಮಾತನಾಡಿದ ಯತ್ನಾಳ್, ಹುಬ್ಬಳ್ಳಿಯಲ್ಲಿ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆ ಮತ್ತು ವಿಪರೀತ ಮಾದಕ ದ್ರವ್ಯ ದಂಧೆಯೇ ಇದಕೆಲ್ಲ ಕಾರಣ ಎಂದರು. ರಾಜ್ಯಾದ್ಯಂತ ಮಾದಕ ವಸ್ತುಗಳ ಮಾರಾಟ ನಡೆಯುತ್ತಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಸರ್ಕಾರ ಮೃತರ ಕುಟುಂಬಕ್ಕೆ ಭದ್ರತೆ ನೀಡುವ ಬದಲು ಆರೋಪಿಗಳಿಗೆ ರಕ್ಷಣೆ ನೀಡುತ್ತಿದೆ ಎಂದು ಆರೋಪಿಸಿದರು. ಗೃಹ ಸಚಿವ ಜಿ ಪರಮೇಶ್ವರ ಅವರು ತಮ್ಮನ್ನು ರಕ್ಷಿಸಿಕೊಳ್ಳುವ ಸಲುವಾಗಿ ಹಾಗೂ ಸರ್ಕಾರದ ವೈಫಲ್ಯವನ್ನು ಮುಚ್ಚುವ ಸಲುವಾಗಿ ನಾಲ್ವರು ಉನ್ನತ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿದ್ದಾರೆ. ಗೃಹ ಸಚಿವ ಪರಮೇಶ್ವರ್ ಅವರಿಗೆ ಹುದ್ದೆಯನ್ನು ನಿಭಾಯಿಸಲು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಿ ಬೇರೆ ಇಲಾಖೆಯನ್ನು ವಹಿಸಿಕೊಳ್ಳಲಿ ಎಂದು ಕಿಡಿಕಾರಿದರು.
Poll (Public Option)

Post a comment
Log in to write reviews