
ಭಾರತದ ಹಿರಿಯ ಉದ್ಯಮಿ ರತನ್ ಟಾಟಾ ಆರೋಗ್ಯ ಪರಿಸ್ಥಿತಿ ಹದಗೆಟ್ಟು ಆಸ್ಪತ್ರೆಗೆ ದಾಖಲಾದ ಘಟನೆ ವರದಿಯಾಗಿದ್ದು, ರಕ್ತದೊತ್ತಡದಲ್ಲಿ ಗಣನೀಯವಾಗಿ ಇಳಿಕೆಯಾಗಿದ್ದರಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ. ವರದಿಗಳ ಪ್ರಕಾರ, ಇಂದು ಮಧ್ಯರಾತ್ರಿ 12:30ರಿಂದ 1 ಗಂಟೆ ಆಸುಪಾಸಿನಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿರುವುದು ತಿಳಿದುಬಂದಿದೆ. ಇದಾದ ಬಳಿಕ ಅವರು ಚೇತರಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಇನ್ನು ರತನ್ ಟಾಟಾ ಅವರೇ ಖುದ್ದಾಗಿ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಆರೋಗ್ಯ ಸ್ಥಿತಿ ಬಗ್ಗೆ ಮಾಹಿತಿ ನೀಡಿದ್ಧಾರೆ. ತಾನು ಆರಾಮವಾಗಿದ್ದೇನೆ. ವಯೋಸಹಜ ಕಾರಣಕ್ಕೆ ವೈದ್ಯಕೀಯ ತಪಾಸಣೆ ಮಾಡಿಸುತ್ತಿದ್ದೇನೆ ಅಷ್ಟೇ. ಯಾರೂ ಆತಂಕ ಪಡಬೇಕಿಲ್ಲ ಎಂದು 86 ವರ್ಷದ ರತನ್ ಟಾಟಾ ಇನ್ಸ್ಟಾಗ್ರಾಮ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.
Poll (Public Option)

Post a comment
Log in to write reviews